Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:5 - ಕನ್ನಡ ಸತ್ಯವೇದವು C.L. Bible (BSI)

5 ನಾನು ಇಸ್ರಯೇಲರ ಹೆಣಗಳನ್ನು ಅವರ ಬೊಂಬೆಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲು ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಇಸ್ರಾಯೇಲರ ಶವಗಳನ್ನು ಅವರ ವಿಗ್ರಹಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಬಿಸಾಡಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಇಸ್ರಾಯೇಲ್ಯರ ಶವಗಳನ್ನು ಅವರ ಬೊಂಬೆಗಳ ಮುಂದೆ ಹಾಕಿ ನಿಮ್ಮ ಯಜ್ಞವೇದಿಗಳ ಸುತ್ತಲು ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲ್ ಜನರ ಸತ್ತ ಹೆಣಗಳನ್ನು ಅವರ ಹೊಲಸು ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಎಲುಬುಗಳನ್ನು ನಿಮ್ಮ ಯಜ್ಞವೇದಿಗಳ ಸುತ್ತಲೂ ಹರಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲರ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಬಲಿಪೀಠಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿ ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:5
6 ತಿಳಿವುಗಳ ಹೋಲಿಕೆ  

ಅವನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡದಲ್ಲಿ ಸಮಾಧಿಗಳನ್ನು ಕಂಡು ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ, ಆ ಬಲಿಪೀಠದ ಮೇಲೆ ಸುಡಿಸಿ ಅದನ್ನು ಹೊಲೆಮಾಡಿದನು. ಹೀಗೆ ದೈವಪುರುಷನೊಬ್ಬನು ಪ್ರಕಟಿಸಿದ ಸರ್ವೇಶ್ವರನ ವಾಕ್ಯ ನೆರವೇರಿತು.


ಕಲ್ಲುಗಂಬಗಳನ್ನು ಒಡೆದುಹಾಕಿ, ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು, ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು


ಆದ್ದರಿಂದ ಇಗೋ, ಆ ಕಣಿವೆಗೆ ತೋಫೆತ್ ಮತ್ತು ಬೆನ್‍ಹಿನ್ನೋಮ್ ಎಂಬ ಹೆಸರುಗಳು ಹೋಗಿ ಸಂಹಾರದ ಕಣಿವೆ ಎಂದು ಕರೆಯಲಾಗುವ ದಿನಗಳು ಬರಲಿವೆ. ಇನ್ನೆಲ್ಲೂ ಸ್ಥಳವಿಲ್ಲವಾಗಿ ಶವಗಳನ್ನು ಆ ತೋಫೆತಿನಲ್ಲಿ ಹೂಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು