Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:6 - ಕನ್ನಡ ಸತ್ಯವೇದವು C.L. Bible (BSI)

6 ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುವು; ಪೂಜಾಸ್ಥಳಗಳು ಪಾಳುಬೀಳುವುವು; ಇದರಿಂದ ನಿಮ್ಮ ಯಜ್ಞವೇದಿಕೆಗಳು ಹಾಳುಪಾಳಾಗುವುವು; ನಿಮ್ಮ ಬೊಂಬೆಗಳು ಪುಡಿಪುಡಿಯಾಗುವುವು; ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು; ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವದರಿಂದಲೂ ಪೂಜಾಸ್ಥಳಗಳು ಪಾಳು ಬೀಳುವದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳುಪಾಳಾಗುವವು, ನಿಮ್ಮ ಬೊಂಬೆಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮಸೂರ್ಯಸ್ತಂಭಗಳು ಕಡಿಯಲ್ಪಡುವವು, ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳಾಗುವುವು. ಪೂಜಾ ಸ್ಥಳಗಳೂ ನಾಶವಾಗುವುವು. ಹೀಗೆ ನಿಮ್ಮ ಬಲಿಪೀಠಗಳು ಸಹ ನಾಶವಾಗಿ, ನಿಮ್ಮ ವಿಗ್ರಹಗಳು ಒಡೆದುಹೋಗಿ ಇಲ್ಲದಂತಾಗುವುವು. ನೀವು ರೂಪಿಸಿದ ಎಲ್ಲವೂ ಕಡಿದು ಬಿದ್ದು ಅಳಿದುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:6
38 ತಿಳಿವುಗಳ ಹೋಲಿಕೆ  

ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.


ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ.


ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು. ನಿಮ್ಮವರು ನಿಮ್ಮ ಬೊಂಬೆಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.


ನೀನು ಕೆತ್ತಿದ ವಿಗ್ರಹಗಳನ್ನು ಒಡೆದುಹಾಕಿ, ನೀನು ನಿಲ್ಲಿಸಿದ ಕಲ್ಲುಕಂಬಗಳನ್ನು ಉರುಳಿಸಿಬಿಡುವೆನು. ನಿನ್ನ ಕೈಗೆಲಸವಾದ ವಿಗ್ರಹಗಳನ್ನು ನೀನು ಪೂಜಿಸದಂತೆ ಮಾಡುವೆನು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು, ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.


ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು.


ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ : ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’


ಸಿಯೋನಿನಿಂದ ಕೇಳಿಬಂದ ಪ್ರಲಾಪನೆ : “ಅಯ್ಯೋ ಹಾಳಾದೆವು, ನಮ್ಮ ಮಾನಮರ್ಯಾದೆ ಕಳೆದುಹೋಯಿತು ! ನಾವು ನಮ್ಮ ನಾಡನ್ನೇ ಬಿಟ್ಟು ತೊಲಗಬೇಕಾಗಿ ಬಂದಿತು. (ಶತ್ರುಗಳಿಂದ) ನಮ್ಮ ಮನೆಮಠಗಳು ನೆಲಸಮವಾದವು.”


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ವಿಗ್ರಹಗಳು ಸಂಪೂರ್ಣವಾಗಿ ಮಾಯವಾಗುವುವು.


ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.


ಅವುಗಳಂತಾಗುವರು ಅವುಗಳನು ಮಾಡುವವರು I ಅವುಗಳಂತಾಗುವರು ಅವುಗಳನು ನಂಬುವವರು II


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆ ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಸರ್ವೇಶ್ವರನ ಮಂಜೂಷದ ಮುಂದೆ ಬಿದ್ದಿತ್ತು.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿನ ಜೆರುಸಲೇಮ್ ನಿವಾಸಿಗಳನ್ನೂ ಕುರಿತು ಇಂತೆನ್ನುತ್ತಾರೆ: ‘ಅವರು ಅನ್ನವನ್ನು ಅಂಜಿಕೆಯಿಂದ ತಿಂದು ನೀರನ್ನು ನಡುಕದಿಂದ ಕುಡಿಯುವರು: ಏಕೆಂದರೆ ಆ ನಾಡಿನಲ್ಲಿರುವವರು ಹಿಂಸಾಚಾರಿಗಳು; ಈ ಕಾರಣ, ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ನಾಡು ಬರಿದಾಗುವುದು.


ನಿನ್ನ ಪಟ್ಟಣಗಳು ಹಾಳಾಗುವುವು; ನೀ ಕಾಡಾಗುವೆ. ಆಗ ನಾನೇ ಸರ್ವೇಶ್ವರನೆಂದು ನೀನು ತಿಳಿದುಕೊಳ್ಳುವೆ.


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಅವು ವ್ಯರ್ಥವಾದವುಗಳು, ಹಾಸ್ಯಾಸ್ಪದ ಕೃತಿಗಳು, ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು