Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:8 - ಕನ್ನಡ ಸತ್ಯವೇದವು C.L. Bible (BSI)

8 ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ಹೇಳಿದ್ದೇನೆಂದರೆ: “ಆದರೆ ನಾನು ನಿಮ್ಮ ಜನರಲ್ಲಿ ಕೆಲವರನ್ನು ಉಳಿದುಕೊಳ್ಳುವಂತೆ ಮಾಡುವೆನು. ನೀವು ಬೇರೆ ದೇಶಗಳಲ್ಲಿ ಚದರಿಹೋಗಿರುವಾಗ ಜನಾಂಗಗಳ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಕೊಲ್ಲಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:8
17 ತಿಳಿವುಗಳ ಹೋಲಿಕೆ  

ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ.


ನಾನು ಕೆಲವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಉಳಿಸಿ, ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು: ನಾನೇ ಸರ್ವೇಶ್ವರ ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನೀವು ಅವನ ಮುಖಾಂತರ, ‘ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿಬಿಡುವೆನು;


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು