Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:11 - ಕನ್ನಡ ಸತ್ಯವೇದವು C.L. Bible (BSI)

11 ಹಿಂಸೆ ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯರು. ಆ ಜನಸಮೂಹದಲ್ಲೂ ಅವರ ಆಸ್ತಿಯಲ್ಲೂ ಶೇಷವೇನೂ ಇರದು; ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಿಂಸೆಯು ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ [ಉಳಿಯರು], ಆ ಜನಸಮೂಹದಲ್ಲಿಯೂ ಅವರ ಆಸ್ತಿಯಲ್ಲಿಯೂ [ಶೇಷವೇನೂ ಇರದು]. ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದುಷ್ಟತನವನ್ನು ದಂಡಿಸಲು ಹಿಂಸೆಯು ಬೆಳೆದು ಕೋಲಾಗಿದೆ. ಜನರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿ ಒಬ್ಬರೂ ಉಳಿಯುವುದಿಲ್ಲ. ಅವರ ಐಶ್ವರ್ಯದಲ್ಲಿ ಏನೂ ಉಳಿಯುವದಿಲ್ಲ; ಪ್ರಮುಖರಾದವರಲ್ಲಿ ಯಾರೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:11
28 ತಿಳಿವುಗಳ ಹೋಲಿಕೆ  

ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


“ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ಆ ದುರ್ದಿನದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಮುಖಂಡರೇ, ಮತ್ತಷ್ಟು ಶೀಘ್ರವಾಗಿ ಹಿಂಸಾಕ್ರಮಣವನ್ನು ಬರಮಾಡಿಕೊಳ್ಳುತ್ತೀರಿ.


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’


ಸರ್ವೇಶ್ವರನಾದ ದೇವರು ನುಡಿದದ್ದು : “ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, ‘ಅಕಟಾ, ಇಸ್ರಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯಲ್ಲಿ ಹಾಕಿ ಸುಡು; ಅವುಗಳಿಂದ ಬೆಂಕಿ ಹೊರಟು ಇಸ್ರಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”


ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು.


ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.


ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.


“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.


ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ಬಲಿಯಾದರವರ ಯಾಜಕರು ಶತ್ರುಕತ್ತಿಗೆ I ವಿಧವೆಯರು ರೋದಿಸಲಿಲ್ಲ ಅವರ ಸಾವಿಗೆ II


ಕೇಡು ಮಾತು, ಕೆಣಕು ಮಾತು ಅವರದು I ಜೊತೆಗೆ ಬಲಾತ್ಕಾರದ ಸೊಕ್ಕು ಮಾತು II


ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II


ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು