ಯೆಹೆಜ್ಕೇಲನು 7:12 - ಕನ್ನಡ ಸತ್ಯವೇದವು C.L. Bible (BSI)12 “ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ. ಅಧ್ಯಾಯವನ್ನು ನೋಡಿ |