ಯೆಹೆಜ್ಕೇಲನು 7:18 - ಕನ್ನಡ ಸತ್ಯವೇದವು C.L. Bible (BSI)18 ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವದು; ಎಲ್ಲರ ಮುಖದಲ್ಲಿಯೂ ನಾಚಿಕೆತೋರುವದು. ಎಲ್ಲರೂ ತಲೆ ಬೋಳಿಸಿಕೊಂಡಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಶೋಕಬಟ್ಟೆಗಳನ್ನು ಧರಿಸಿ ಭಯಗ್ರಸ್ತರಾಗುವರು. ಪ್ರತೀ ಮುಖದಲ್ಲಿ ನಾಚಿಕೆಯು ಕಾಣಿಸುವುದು. ತಮ್ಮ ದುಃಖವನ್ನು ಪ್ರದರ್ಶಿಸಲು ತಮ್ಮ ತಲೆಗಳನ್ನು ಬೋಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು. ಅಧ್ಯಾಯವನ್ನು ನೋಡಿ |