Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:19 - ಕನ್ನಡ ಸತ್ಯವೇದವು C.L. Bible (BSI)

19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧಪದಾರ್ಥದಂತಿರುವದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿವಿಘ್ನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:19
21 ತಿಳಿವುಗಳ ಹೋಲಿಕೆ  

ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


“ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ.


ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


“ಅವರ ಭೋಜನವೇ ಅವರಿಗೆ ಬಲೆಯೂ ಜಾಲವೂ ಆಗಲಿ ಯಾತನೆಯೂ ಪತನವೂ ಆಗಿ ಪರಿಣಮಿಸಲಿ.


ಅವರು ಜೋರ್ಡನ್ ನದಿಯವರೆಗೂ ಹೋಗಿ, ದಾರಿಯಲ್ಲೆಲ್ಲಾ ತಮ್ಮ ಬಟ್ಟೆಬರೆಗಳನ್ನೂ ಸಾಮಾನು ಸರಂಜಾಮುಗಳನ್ನೂ ಬಿಸಾಡಿರುವುದನ್ನು ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.


ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.


ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


ಸರ್ವೇಶ್ವರನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ. ಇಸ್ರಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.


ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.


ಮನುಷ್ಯರು, ಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು - ಇವೆಲ್ಲವನ್ನು ನಾಶಪಡಿಸುವೆನು. ದುರ್ಜನರು ಬಿದ್ದು ಸಾಯುವಂತೆ ಮಾಡುವೆನು; ನರಸಂತಾನವನ್ನು ಧರೆಯ ಮೇಲಿಂದ ಕಿತ್ತುಹಾಕುವೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು