Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:2 - ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ - ಪ್ರಳಯವು, ಪೂರ್ಣಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನ್ನ ಒಡೆಯನಾದ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಇಸ್ರೇಲ್ ದೇಶಕ್ಕೆ ನೀಡು. “ಅಂತ್ಯ, ಅಂತ್ಯವು ಬರುವುದು. ಇಡೀ ದೇಶವು ಹಾಳಾಗಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “ ‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:2
28 ತಿಳಿವುಗಳ ಹೋಲಿಕೆ  

ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


“ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ. “ಅಯ್ಯೋ, ಸರ್ವೇಶ್ವರನಾದ ದೇವರೇ, ಇಸ್ರಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲನಮಾಡುವಿರೋ?” ಎಂದು ಮೊರೆಯಿಟ್ಟೆ.


ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!


ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:


“ನರಪುತ್ರನೇ, ‘ಕ್ಲುಪ್ತಕಾಲ ದೂರ ದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ’ ಎಂಬುದಾಗಿ ಇಸ್ರಯೇಲ್ ನಾಡಿನವರು ಆಡಿಕೊಳ್ಳುವ ಈ ಗಾದೆ ಏನು?


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ; ನಾಲ್ಕುಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿದ್ದರು. ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ, ಮರಗಳ ಮೇಲಾಗಲಿ ಗಾಳಿಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ಅವರು ತಡೆಹಿಡಿದಿದ್ದರು.


ಅವನು ಬಂದು ಭೂಮಿಯ ಅಷ್ಟದಿಕ್ಕುಗಳಲ್ಲಿರುವ ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸುವನು. ಯುದ್ಧಮಾಡುವುದಕ್ಕಾಗಿ ಅವರನ್ನು ಒಟ್ಟುಗೂಡಿಸುವನು. ಅವರ ಸಂಖ್ಯೆ ಸಮುದ್ರತೀರದ ಮರಳಿನಷ್ಟಿರುವುದು.


ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಇದಲ್ಲದೆ ಸರ್ವೇಶ್ವರ ಅನುಗ್ರಹಿಸಿದ ಈ ವಾಣಿ ನನಗೆ ಕೇಳಿಸಿತು:


ನಾನು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗ ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು;


ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


“ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ.


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು