Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:21 - ಕನ್ನಡ ಸತ್ಯವೇದವು C.L. Bible (BSI)

21 ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡುವೆನು. ಅನ್ಯರ ಕೈಯಿಂದ ಕೊಳ್ಳೆ ಹೊಡೆಯಿಸಿ ಲೋಕಕುಖ್ಯಾತ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆ ಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೇರೆ ದೇಶದವರು ಅವರ ಐಶ್ವರ್ಯವನ್ನು ಲೂಟಿಮಾಡಿಕೊಂಡು ಹೋಗಲು ನಾನು ಅವಕಾಶಕೊಡುವೆನು. ಭೂಮಿಯ ಮೇಲಿರುವ ಅತ್ಯಂತ ದುಷ್ಟರಾದ ಜನರಿಗೆ ನಾನು ಅದನ್ನು ಕೊಳ್ಳೆಯನ್ನಾಗಿ ಕೊಡುವೆನು. ಅವರು ಅದನ್ನು ಹೊಲಸು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. ಅವರು ಅದನ್ನು ಅಪವಿತ್ರಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:21
10 ತಿಳಿವುಗಳ ಹೋಲಿಕೆ  

ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಕಸಿದುಕೊಳ್ಳಲಿ ಅವನದೆಲ್ಲವನು ಸಾಲಿಗನು I ಸುಲಿದುಕೊಳ್ಳಲಿ ಪರರು ಅವನ ಕಷ್ಟಾರ್ಜಿತವನು II


ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”


ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು