Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:24 - ಕನ್ನಡ ಸತ್ಯವೇದವು C.L. Bible (BSI)

24 ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೀಗಿರಲು ನಾನು ಅತಿದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:24
18 ತಿಳಿವುಗಳ ಹೋಲಿಕೆ  

‘ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸುಮಾಡುವರು.


ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ಎಂತಲೆ ಒಪ್ಪಿಸಿದನವರನು ಅನ್ಯರಾಷ್ಟ್ರಗಳ ಕೈಗೆ I ಹಗೆಮಾಡುತ್ತಿದ್ದವರೇ ಅಧಿಕಾರಿಗಳಾದರವರಿಗೆ II


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:


ನಮ್ಮ ಆಸ್ತಿಪಾಸ್ತಿ ಪರರಪಾಲಾಗಿದೆ ನಮ್ಮ ಮನೆಮಾರುಗಳು ಹೆರವರ ವಶದಲ್ಲಿವೆ.


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


ಅವರ ಹೆಂಡತಿ, ಮನೆ, ಹೊಲ, ಗದ್ದೆ ಎಲ್ಲವೂ ಅನ್ಯರ ಪಾಲಾಗುವುದು.” “ನಾಡಿನ ನಿವಾಸಿಗಳ ಮೇಲೆ ಕೈಮಾಡುವೆನೆಂಬುದು ಖಚಿತ. ಇದು ಸರ್ವೇಶ್ವರನಾದ ನನ್ನ ನುಡಿ.


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.


ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲತಕ್ಕದ್ದು ಎಂಬ ಯೋಜನೆಯನ್ನು ಜೋಸೆಫನು ಈಜಿಪ್ಟ್ ದೇಶದ ಒಂದು ಶಾಸನವನ್ನಾಗಿ ಮಾಡಿದನು. ಈ ದಿನದವರೆಗೂ ಆ ಶಾಸನ ರೂಢಿಯಲ್ಲಿದೆ. ಅರ್ಚಕರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.


ಅಗ್ನಿಗಾಹುತಿ ಮಾಡಿಹರು ನಿನ್ನ ನಾಮದ ಮಂದಿರವನು I ಹೊಲಸುಮಾಡಿ, ನೆಲಸಮಮಾಡಿಹರಿದೊ ನಿನ್ನ ದೇಗುಲವನು II


ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.


ಅವರ ಆಸ್ತಿಪಾಸ್ತಿಯೆಲ್ಲಾ ಸೂರೆಯಾಗುವುದು, ಅವರ ಮನೆಮಠಗಳು ಹಾಳಾಗುವುವು; ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು; ದ್ರಾಕ್ಷಾತೋಟಗಳನ್ನು ಬೆಳೆಸಿಕೊಂಡರೂ ಅವುಗಳಿಂದ ದ್ರಾಕ್ಷಾರಸವನ್ನು ಕುಡಿಯರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು