Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:26 - ಕನ್ನಡ ಸತ್ಯವೇದವು C.L. Bible (BSI)

26 ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಂದರ ಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಬುದ್ಧಿವಾದವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:26
26 ತಿಳಿವುಗಳ ಹೋಲಿಕೆ  

ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”


ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಬಂದು,


ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.


ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;


“ನರಪುತ್ರನೇ, ‘ಕ್ಲುಪ್ತಕಾಲ ದೂರ ದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ’ ಎಂಬುದಾಗಿ ಇಸ್ರಯೇಲ್ ನಾಡಿನವರು ಆಡಿಕೊಳ್ಳುವ ಈ ಗಾದೆ ಏನು?


‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


“ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು