ಯೆಹೆಜ್ಕೇಲನು 7:27 - ಕನ್ನಡ ಸತ್ಯವೇದವು C.L. Bible (BSI)27 ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅರಸನು ದುಃಖಿಸುವನು. ದಿಗಿಲು ಪ್ರಭುವನ್ನು ಮುಸುಕುವದು, ಸಾಧಾರಣ ಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅರಸನು ದುಃಖಿಸುವನು, ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. ದೇಶದ ಜನರ ಕೈಗಳು ತತ್ತರಿಸುವುವು, ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. “ ‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ” ಅಧ್ಯಾಯವನ್ನು ನೋಡಿ |