Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:8 - ಕನ್ನಡ ಸತ್ಯವೇದವು C.L. Bible (BSI)

8 “ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು ನನ್ನ ಕೋಪವನ್ನು ತೀರಿಸಿಕೊಂಡು ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ಉಣ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇನ್ನು ಸ್ವಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನ್ನೆಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:8
35 ತಿಳಿವುಗಳ ಹೋಲಿಕೆ  

“ನಾನು ಆ ನಾಡಿನ ಮೇಲೆ ಕೋಪಕಾರಿ, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನ ಜಾನುವಾರುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸರ್ವೇಶ್ವರನಾದ ದೇವರೇ, ನೀವು ಜೆರುಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿಸಿ ಇಸ್ರಯೇಲಿನ ಶೇಷವನ್ನೆಲ್ಲಾ ನಾಶಮಾಡುವಿರೋ?” ಎಂದು ಮೊರೆಯಿಟ್ಟೆ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.


ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ, ನಿಮ್ಮ ಮೇಲೆ ದೊರೆತನಮಾಡುವೆನು;


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


“ಜುದೇಯದ ಮುಖಂಡರು, ಗಡಿದಾಟಿ ಆಕ್ರಮಣಮಾಡುವವರನ್ನು ಹೋಲುತ್ತಾರೆ. ಅವರ ಮೇಲೆ ನನ್ನ ಕೋಪಾಗ್ನಿಯನ್ನು ಸುರಿಸುತ್ತೇನೆ.


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.


ಈಜಿಪ್ಟಿಗೆ ರಕ್ಷಣಾ ಕೋಟೆಯಾದ ಪೆಲೂಸಿಯಮ್‍ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕತ್ತರಿಸಿಬಿಡುವೆನು.


ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.


ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಸುರಿ ರೌದ್ರವನು ನಿನ್ನನರಿಯದಾ ಮ್ಲೇಚ್ಛರ ಮೇಲೆ I ನಿನ್ನ ಶ್ರೀನಾಮವನು ಉಚ್ಚರಿಸದಾ ರಾಜ್ಯಗಳ ಮೇಲೆ II


“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.


ಆದರೆ ನೀವು ಸರ್ವೇಶ್ವರನ ಕ್ರಮವು ಸರಿಯಿಲ್ಲವೆಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುನೀಡುವೆನು.”


ಅರಸನನ್ನೂ ಅವನ ಸಂತತಿ ಹಾಗೂ ಸೇವಕರನ್ನೂ ಅವರು ಮಾಡಿದ ಅಧರ್ಮಕ್ಕಾಗಿ ದಂಡಿಸುವೆನು. ನಾನು ಇವರನ್ನು, ಜೆರುಸಲೇಮಿನವರನ್ನು ಹಾಗೂ ಯೆಹೂದ್ಯರನ್ನು ‘ನಿಮಗೆ ದೊಡ್ಡ ಕೇಡಾಗಲಿದೆ’ ಎಂದು ಎಚ್ಚರಿಸಿದರೂ ಅವರು ಕೇಳಲಿಲ್ಲ. ಆದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’.”


ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”


ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು