ಯೆಹೆಜ್ಕೇಲನು 7:9 - ಕನ್ನಡ ಸತ್ಯವೇದವು C.L. Bible (BSI)9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು. ಅಧ್ಯಾಯವನ್ನು ನೋಡಿ |