Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:1 - ಕನ್ನಡ ಸತ್ಯವೇದವು C.L. Bible (BSI)

1 ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಆರನೆಯ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕೂತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿವಸ ನಾನು ನನ್ನ ಮನೆಯಲ್ಲಿ ಕುಳಿತುಕೊಂಡಿದ್ದೆನು. ಯೆಹೂದದ ನಾಯಕರು ನನ್ನ ಮುಂದೆ ಕುಳಿತಿದ್ದರು. ಇದು ಸೆರೆಹಿಡಿದ ಆರನೇ ವರ್ಷದ, ಆರನೆಯ ತಿಂಗಳಿನ, ಐದನೇ ದಿವಸವಾಗಿತ್ತು. ಫಕ್ಕನೆ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ನಾನು ಪರವಶನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:1
24 ತಿಳಿವುಗಳ ಹೋಲಿಕೆ  

ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಬಂದು,


“ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರಲ್ಲಿ ಯಾರು ಯಾರು ವಿಗ್ರಹಗಳನ್ನು ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೋ, ಪಾಪಕಾರಿಯಾದ ಆ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೋ ಅಂಥವರು ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬಂದರೆ ಅವರು ಪಾತಕಕ್ಕೆ ಅಂದರೆ, ಅವರ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಸರ್ವೇಶ್ವರನಾದ ನಾನೇ ಅವರಿಗೆ ಉತ್ತರಕೊಡುವೆನು.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ ಅಂದರೆ, ಪಟ್ಟಣವು ಹಾಳಾದ ಹದಿನಾಲ್ಕನೆಯ ವರ್ಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಹೌದು, ಆ ದಿನದಲ್ಲೇ ನಾನು ಸರ್ವೇಶ್ವರಸ್ವಾಮಿಯ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನ್ನನ್ನು ಅಲ್ಲಿಗೆ ಒಯ್ದರು.


ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು.


ಹನ್ನೆರಡನೆಯ ವರ್ಷದ ಹದಿನೈದನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು -


ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಇಪ್ಪತ್ತೇಳನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ಹನ್ನೊಂದನೆಯ ವರ್ಷದ ಒಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು:


ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು.


ಅದೇ ಸ್ಥಳದಲ್ಲಿ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನಗೆ, “ನೀನೆದ್ದು ಬಯಲುಪ್ರದೇಶಕ್ಕೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತಾಡುವೆನು,” ಎಂದು ಹೇಳಿದರು.


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು.


ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ನನಗೆ ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತ ಕಾಂತಿಯೊಂದು ಹೊಳೆಯಿತು.


ಅವನು ಬರುವುದಕ್ಕೆ ಹಿಂದಿನ ಸಾಯಂಕಾಲ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆ ಪಲಾಯಿತನು ಬೆಳಿಗ್ಗೆ ಬರುವನೆಂದು ಸರ್ವೇಶ್ವರ ನನ್ನ ಬಾಯನ್ನು ಬಿಚ್ಚಿದರು; ಹೌದು ನನ್ನ ಬಾಯಿ ಬಿಚ್ಚಿತ್ತು, ನನ್ನ ಮೂಕತನ ಹೋಗಿತ್ತು.


ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ ಏಳನೆಯ ದಿವಸದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು.


ಹನ್ನೆರಡನೆಯ ವರ್ಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು