ಯೆಹೆಜ್ಕೇಲನು 8:16 - ಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು . ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |
ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.