Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:17 - ಕನ್ನಡ ಸತ್ಯವೇದವು C.L. Bible (BSI)

17 ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:17
25 ತಿಳಿವುಗಳ ಹೋಲಿಕೆ  

ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


“ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ.


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.


ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ಆ ದುರ್ದಿನದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಮುಖಂಡರೇ, ಮತ್ತಷ್ಟು ಶೀಘ್ರವಾಗಿ ಹಿಂಸಾಕ್ರಮಣವನ್ನು ಬರಮಾಡಿಕೊಳ್ಳುತ್ತೀರಿ.


ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಈಜಿಪ್ಟರೊಂದಿಗೆ ಸಹ ನೀನು ಕಲೆತು ಹೆಚ್ಚಾಗಿ ಹಾದರಮಾಡಿ ನನ್ನನ್ನು ಕೆರಳಿಸಿರುವೆ.


ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಹಿಂಸೆ ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯರು. ಆ ಜನಸಮೂಹದಲ್ಲೂ ಅವರ ಆಸ್ತಿಯಲ್ಲೂ ಶೇಷವೇನೂ ಇರದು; ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.


ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.


ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು.


ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು.


ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ ! ಅದರ ಶತ್ರುಗಳಿಗೋ ಸುಖಸಮೃದ್ಧಿ ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ !


ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು; ನಿನ್ನ ಮೂಗುಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.


ನೀ ಪಾಪಿಯಾದೆ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರಗಳು ತುಂಬಿಕೊಂಡದ್ದರಿಂದ. ಎಂದೇ, ಹೊಲಸೆಂಬಂತೆ ನಿನ್ನ ತಳ್ಳಿಬಿಟ್ಟೆ ದೇವರ ಬೆಟ್ಟದಿಂದ ಕಿತ್ತೆಸೆದುಬಿಟ್ಟೆ ಕೆಂಡದ ನಡು ಮಡುವಿನ ನೆಲೆಯಿಂದ ನೆರಳು ನೀಡುವ ಕೆರೂಬಿಯೇ ಎಸೆಯಿತು ನಿನ್ನನ್ನು ಅಲ್ಲಿಂದ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು