Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:3
39 ತಿಳಿವುಗಳ ಹೋಲಿಕೆ  

ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.


ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಕೈಬೆರಳುಗಳು ಕಾಣಿಸಿಕೊಂಡು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು. ಬರೆಯುತ್ತಿದ್ದ ಆ ಕೈಯನ್ನು ರಾಜನು ನೋಡಿದನು.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು; ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ನಿಮ್ಮ ಮಧ್ಯೆಯಿರುವ ನಿಮ್ಮ ದೇವರಾದ ಸರ್ವೇಶ್ವರ ತಮಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಬಹುದು.


ಅವುಗಳಿಗೆ ಅಡ್ಡಬೀಳಬೇಡ. ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ, ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಹೆತ್ತವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.


ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.


ಆಗ ಯಾರದೋ ಕೈ ನನ್ನನ್ನು ಮುಟ್ಟಿದಂತಾಯಿತು. ನಾನು ಗಡಗಡನೆ ನಡುಗುತ್ತಾ ಅಂಗೈಗಳನ್ನೂ ಮೊಣಕಾಲುಗಳನ್ನೂ ಊರಿ ನಿಲ್ಲುವಂತೆ ಮಾಡಿತು.


ಆಗ ಅವರು ನನಗೆ, “ನರಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದಲ್ಲಿ ಪ್ರವೇಶದ್ವಾರದ ಮುಂದೆ ನಿಂತಿತ್ತು.


“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.


ಸರ್ವೇಶ್ವರನ ನುಡಿ : “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೆ ಮಾಡಿದ್ದಾರೆ. ನನ್ನ ಹೆಸರಿನಿಂದ ಪ್ರಖ್ಯಾತಗೊಂಡ ದೇವಾಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ


ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು.


ಅನಂತರ ಅವರು ಅವನಿಗೆ, “ನಿಮ್ಮ ಸೇವಕರಾದ ನಮ್ಮಲ್ಲಿ ಐವತ್ತುಮಂದಿ ಬಲಿಷ್ಠ ಜನರಿದ್ದಾರೆ; ನಿಮ್ಮ ಯಜಮಾನರನ್ನು ಹುಡುಕಲು ಹೋಗುವುದಕ್ಕೆ ಅವರಿಗೆ ಅಪ್ಪಣೆಯಾಗಲಿ. ಸರ್ವೇಶ್ವರನ ಆತ್ಮ ಅವರನ್ನು ಎತ್ತಿಕೊಂಡುಹೋಗಿ ಒಂದು ಬೆಟ್ಟದ ಮೇಲಾಗಲಿ, ತಗ್ಗಿನಲ್ಲಾಗಲಿ ಇಟ್ಟಿರಬಹುದು,” ಎಂದು ಹೇಳಿದರು. ಅವನು, “ನೀವು ಕಳುಹಿಸಬೇಡಿ,” ಎಂದನು.


ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.


ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.


ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಿನ ಆವರಣವನ್ನು ತುಂಬಿತ್ತು.


ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು.


ದೇವರಾತ್ಮ ನನ್ನನ್ನು ಎತ್ತಿ ಒಳಗಿನ ಪ್ರಾಕಾರಕ್ಕೆ ತಂದಿತು. ಆಗ ಏನಾಶ್ಚರ್ಯ! ಸರ್ವೇಶ್ವರನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.


ನನ್ನ ಹೊಸ್ತಲನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು, ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ನನ್ನ ಪವಿತ್ರನಾಮವನ್ನು ಅಶುದ್ಧಗೊಳಿಸರು. ಹೌದು, ಹಿಂದೆ ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲೆಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆ.


ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು