Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಇಗೋ, ಇಸ್ರಯೇಲಿನ ದೇವರ ಮಹಿಮಾದ್ಭುತ ದರ್ಶನವು ಬಯಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಹಾ, ಇಸ್ರಾಯೇಲಿನ ದೇವರ ಮಹಿಮಾದ್ಭುತದರ್ಶನವು ಬೈಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲಿನ ದೇವರ ಮಹಿಮೆಯು ಅಲ್ಲಿ ಇತ್ತು. ಆ ಮಹಿಮೆ ನಾನು ಕೆಬಾರ್ ಕಾಲುವೆಯ ಪಕ್ಕದ ಕಣಿವೆಯಲ್ಲಿ ಕಂಡ ದರ್ಶನದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲಿನ ದೇವರ ಮಹಿಮೆಯು, ನಾನು ಆ ಬಯಲುಸೀಮೆಯಲ್ಲಿ ನೋಡಿದ ಆಕಾರದ ಪ್ರಕಾರವೇ ಅಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:4
12 ತಿಳಿವುಗಳ ಹೋಲಿಕೆ  

ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು