Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:9 - ಕನ್ನಡ ಸತ್ಯವೇದವು C.L. Bible (BSI)

9 ದೇವರು ನನಗೆ, “ನೀನು ಒಳಹೊಕ್ಕು ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದು ಹೇಳಿದರು. ನಾನು ಹೊಕ್ಕು ನೋಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ನನಗೆ - ನೀನು ಒಳಹೊಕ್ಕು ಜನರು ಇಲ್ಲಿ ನಡಿಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು ಎಂದು ಹೇಳಿದಾಗ ನಾನು ಹೊಕ್ಕು ನೋಡಿದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ದೇವರು ನನಗೆ, “ಜನರು ಇಲ್ಲಿ ಮಾಡುತ್ತಿರುವ ಅಸಹ್ಯವಾದ ದುಷ್ಕೃತ್ಯಗಳನ್ನು ಹೋಗಿ ನೋಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಆತನು ನನಗೆ, “ನೀನು ಒಳಗೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದನು. ನಾನು ಒಳಗೆ ಹೋಗಿ ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:9
4 ತಿಳಿವುಗಳ ಹೋಲಿಕೆ  

ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.


ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.


ಆಗ ಅವರು ನನಗೆ, “ನರಪುತ್ರನೇ, ಗೋಡೆಯನ್ನು ತೋಡು,” ಎಂದು ಹೇಳಿದರು. ನಾನು ಗೋಡೆಯನ್ನು ತೋಡಿದೆ. ಆಗ ಇಗೋ, ಒಂದು ಬಾಗಿಲು ಕಾಣಿಸಿತು.


ಅಕಟಾ, ಎಲ್ಲಾ ಜಾತಿಯ ಕ್ರಿಮಿಕೀಟಗಳು, ಅಸಹ್ಯ ಮೃಗಗಳು ಹಾಗು ಇಸ್ರಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳು ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು