Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:10 - ಕನ್ನಡ ಸತ್ಯವೇದವು C.L. Bible (BSI)

10 ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:10
25 ತಿಳಿವುಗಳ ಹೋಲಿಕೆ  

ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


“ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.


“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.


ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


ನೀವು ಪರಲೋಕದಿಂದ ಅದನ್ನು ಕೇಳಿ ನಿಮ್ಮ ಭಕ್ತರ ವ್ಯಾಜ್ಯವನ್ನು ತೀರಿಸಿರಿ. ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ, ಅವನು ನೀತಿವಂತನೆಂದು ತೋರಿಸಿಕೊಡಿ.


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


ಇವರ ಬಿಲ್ಲುಗಳು ಯುವಜನರನ್ನು ಚೂರುಚೂರು ಮಾಡುವುವು; ಇವರು ಕರುಳ ಕುಡಿಗಳನ್ನೂ ಕನಿಕರಿಸರು; ಮಕ್ಕಳುಮರಿಗಳನ್ನೂ ಕರುಣಿಸದು ಇವರ ಕಣ್ಣು.


ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ ! ಅದರ ಶತ್ರುಗಳಿಗೋ ಸುಖಸಮೃದ್ಧಿ ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ !


ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನು, “ನಿಮ್ಮ ಅಪ್ಪಣೆಯಂತೆಯೇ ಮಾಡಿದ್ದೇನೆ,” ಎಂದು ಅರಿಕೆಮಾಡಿದನು.


ನಿಮ್ಮ ಲಂಪಟತನದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪದ ಫಲವನ್ನು ನೀವು ಅನುಭವಿಸಿ, ನಾನೇ ಸರ್ವೇಶ್ವರನಾದ ದೇವರು ಎಂದು ತಿಳಿದುಕೊಳ್ಳುವಿರಿ.”


ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


“ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.


ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು. ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದ‍ನ್ನು ಕಂಡೆನೋ ಅಂಥದನ್ನೇ ಕಂಡೆನು. ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತ ದರ್ಶನದಂಥ ದರ್ಶನ ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆ.


ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು