Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:2 - ಕನ್ನಡ ಸತ್ಯವೇದವು C.L. Bible (BSI)

2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಆರು ಮಂದಿ ಪುರುಷರು ಉತ್ತರದಿಕ್ಕಿನಲ್ಲಿದ್ದ ಮೇಲಿನ ದ್ವಾರದ ಮಾರ್ಗದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಪ್ರತಿಯೊಬ್ಬನ ಕೈಯಲ್ಲಿ ಮಾರಕಾಸ್ತ್ರವಿತ್ತು. ಅವರಲ್ಲೊಬ್ಬನು ನಾರುಮಡಿಯನ್ನು ಧರಿಸಿದ್ದನು. ಅವನ ಸೊಂಟದಲ್ಲಿ ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವಿತ್ತು. ಅವರು ಆಲಯದೊಳಗಿದ್ದ ತಾಮ್ರದ ವೇದಿಕೆಯ ಬಳಿ ಹೋಗಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:2
21 ತಿಳಿವುಗಳ ಹೋಲಿಕೆ  

ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರಷನಿಗೆ ದೇವರು, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಯ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ ತಂದು ಪಟ್ಟಣದ ಮೇಲೆ ಎರಚು,” ಎಂದು ಅಪ್ಪಣೆಕೊಟ್ಟರು. ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.


ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.


ಏಳು ವಿಪತ್ತುಗಳನ್ನು ಹಿಡಿದಿದ್ದ ಏಳು ದೇವದೂತರು ಈ ದೇವಾಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಹೊಳೆಯುವ ಉಡುಪುಗಳನ್ನು ತೊಟ್ಟಿದ್ದರು; ಎದೆಗಳಿಗೆ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡು ಇದ್ದರು.


ಆದರೆ ಇವನ ಕಾಲದಲ್ಲೂ ಪೂಜಾಸ್ಥಳಗಳು ಇನ್ನು ಹಾಗೆಯೇ ಇದ್ದವು. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದರು. ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.


ಜುದೇಯದ ನಾಯಕರಿಗೂ ಈ ಸಮಾಚಾರ ಮುಟ್ಟಿತು. ಅವರು ಅರಮನೆಯಿಂದ ಧಾವಿಸಿಬಂದು ಸರ್ವೇಶ್ವರನಾಲಯದ ಹೊಸ ಬಾಗಿಲ ಬಳಿ ಆಸೀನರಾದರು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಇಗೋ, ಉತ್ತರದ ರಾಜ್ಯಗಳನ್ನೆಲ್ಲಾ ನಾನು ಕರೆಯುವೆನು; ಅವರು ಬಂದು ಜೆರುಸಲೇಮಿನ ಊರಬಾಗಿಲುಗಳ ಎದುರಿನಲ್ಲೂ ಅದರ ಎಲ್ಲ ಪೌಳಿಗೋಡೆಗಳ ಸುತ್ತಲೂ ಜುದೇಯದ ಎಲ್ಲ ನಗರಗಳಲ್ಲೂ ತಮ್ಮ ತಮ್ಮ ಸಿಂಹಾಸನಗಳನ್ನು ಹಾಕಿಕೊಳ್ಳುವರು.


ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.


ಇದಲ್ಲದೆ, ಸೊಲೊಮೋನನು ತಾಮ್ರದ ಬಲಿಪೀಠವನ್ನು ಮಾಡಿಸಿದನು. ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ 4:5 ಮೀಟರ್,


ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.


ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,


ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನು, “ನಿಮ್ಮ ಅಪ್ಪಣೆಯಂತೆಯೇ ಮಾಡಿದ್ದೇನೆ,” ಎಂದು ಅರಿಕೆಮಾಡಿದನು.


ಕಣ್ಣೆತ್ತಿ ನೋಡಲು, ನಾರುಬಟ್ಟೆಯನ್ನು ಹೊದ್ದುಕೊಂಡಿದ್ದ, ಊಫಜಿನ ಬಂಗಾರದ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದ, ಒಬ್ಬ ವ್ಯಕ್ತಿ ನನಗೆ ಕಾಣಿಸಿದ.


ಇವರಲ್ಲಿ ಒಬ್ಬನು, ನದಿಯ ನೀರಿನ ಮೇಲ್ಗಡೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ದೂತನನ್ನು ನೋಡಿ, “ಈ ಆಶ್ಚರ್ಯಕಾರ್ಯಗಳು ನೆರವೇರಲು ಎಷ್ಟುಕಾಲ ಹಿಡಿಯುವುದು?” ಎಂದು ಕೇಳಿದನು.


ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು.


ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.


ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು