ಯೆಹೆಜ್ಕೇಲನು 9:4 - ಕನ್ನಡ ಸತ್ಯವೇದವು C.L. Bible (BSI)4 “ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.