ಯೆಹೆಜ್ಕೇಲನು 9:9 - ಕನ್ನಡ ಸತ್ಯವೇದವು C.L. Bible (BSI)9 ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |