Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:13 - ಕನ್ನಡ ಸತ್ಯವೇದವು C.L. Bible (BSI)

13 “ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ನೆನಪುಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಈ ದೇಶವನ್ನು ಕೊಟ್ಟು ವಿಶ್ರಾಂತಿಯನ್ನುಂಟುಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಯೆಹೋವನ ಸೇವಕನಾದ ಮೋಶೆಯು ನಿಮಗೆ ಹೇಳಿದ್ದನ್ನು ನೆನಪುಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ವಿಶ್ರಾಂತಿಗಾಗಿ ಒಂದು ದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕಮಾಡಿಕೊಳ್ಳಿರಿ. ‘ನಿಮ್ಮ ದೇವರಾದ ಯೆಹೋವ ದೇವರು ಈ ದೇಶವನ್ನು ನಿಮಗೆ ಕೊಟ್ಟು ನಿಮ್ಮನ್ನು ವಿಶ್ರಾಂತಿಪಡಿಸಿದ್ದಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:13
6 ತಿಳಿವುಗಳ ಹೋಲಿಕೆ  

ನಿಮ್ಮ ಮಡದಿಮಕ್ಕಳು ಮತ್ತು ದನಕುರಿಗಳು ಮೋಶೆ ನಿಮಗೆ ಜೋರ್ಡನಿನ ಆಚೆ ಕೊಟ್ಟ ನಾಡಿನಲ್ಲೇ ಇರಲಿ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ನದಿದಾಟಿ, ಅವರಿಗೆ ನೆರವಾಗಬೇಕು.


ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು.


ಇದು ಸರ್ವೇಶ್ವರನಾದ ನನ್ನ ನುಡಿ. ಅಳಿದುಳಿದಾ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯಿತು. ಇಸ್ರಯೇಲ್ ಶಾಂತಿಯನ್ನು ಅರಸುತ್ತಾ ಹೋಗುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು