Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:2 - ಕನ್ನಡ ಸತ್ಯವೇದವು C.L. Bible (BSI)

2 ನೀನೀಗ ಎದ್ದು ಸಮಸ್ತ ಪ್ರಜೆಯೊಂದಿಗೆ ಜೋರ್ಡನ್ ನದಿಯನ್ನು ದಾಟಿ, ನಾನು ಇಸ್ರಯೇಲರಿಗೆ ಕೊಡುವ ನಾಡಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸೇವಕನಾದ ಮೋಶೆ ಸತ್ತನು; ನೀನು ಈಗ ಎದ್ದು ಸಮಸ್ತ ಪ್ರಜಾಸಹಿತವಾಗಿ ಈ ಯೊರ್ದನ್ ಹೊಳೆಯನ್ನು ದಾಟಿ ನಾನು ಇಸ್ರಾಯೇಲ್ಯರಿಗೆ ಕೊಡುವ ದೇಶಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನನ್ನ ಸೇವಕನಾದ ಮೋಶೆಯು ಸತ್ತನು. ಈಗ ನೀನು ಮತ್ತು ಈ ಜನರು ಜೋರ್ಡನ್ ನದಿಯನ್ನು ದಾಟಿಹೋಗಬೇಕು. ಇಸ್ರೇಲಿನ ಜನರಾದ ನಿಮಗೆ ನಾನು ಕೊಡಲಿರುವ ದೇಶಕ್ಕೆ ನೀವು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನನ್ನ ಸೇವಕನಾದ ಮೋಶೆಯು ಮರಣಹೊಂದಿದನು. ಈಗ ನೀನು ಇಸ್ರಾಯೇಲರಾದ ಈ ಜನರೆಲ್ಲರ ಸಹಿತವಾಗಿ ಎದ್ದು, ಯೊರ್ದನ್ ನದಿಯನ್ನು ದಾಟಿ, ಇಸ್ರಾಯೇಲರಿಗೆ ನಾನು ಕೊಡುವ ದೇಶಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:2
13 ತಿಳಿವುಗಳ ಹೋಲಿಕೆ  

ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.


ಅನಂತರ ಮೋಶೆ ಯೆಹೋಶುವನನ್ನು ಕರೆದು ಇಸ್ರಯೇಲರೆಲ್ಲರ ಮುಂದೆ, “ಸರ್ವೇಶ್ವರ ಇವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿರು, ಧೈರ್ಯದಿಂದಿರು;


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ಜನರಿಗೆ, ‘ನೀವು ಇನ್ನು ಮೂರು ದಿನಗಳಲ್ಲಿ ಈ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತ ಸೊತ್ತಾಗಿ ಕೊಡುವ ನಾಡನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರ ಪದಾರ್ಥಗಳನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ,” ಎಂದನು.


ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು:


ನನ್ನ ದಾಸನಾದ ಮೋಶೆ ಅಂಥವನಲ್ಲ ಅವನೇ ನಂಬಿಗಸ್ತ ನನ್ನ ಮನೆಯಲ್ಲೆಲ್ಲಾ.


ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಹೆಚ್ಚಿಸಿದಿರಿ ಅವರ ಮಕ್ಕಳನು ಆಗಸದ ನಕ್ಷತ್ರಗಳಷ್ಟೆ; ಬರಮಾಡಿದಿರಿ ಆ ಮಕ್ಕಳನು ವಾಗ್ದತ್ತ ನಾಡಿಗೆ ‘ಅದ ಸೇರಿ, ವಶಮಾಡಿಕೊಳ್ಳಿ’ ಎಂದು ಹೇಳಿದಿರಾ ಪಿತೃಗಳಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು