Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:6 - ಕನ್ನಡ ಸತ್ಯವೇದವು C.L. Bible (BSI)

6 “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನನ್ನು ಕೈಬಿಡುವದಿಲ್ಲ, ತೊರೆಯುವದಿಲ್ಲ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಯಾಕಂದರೆ ನಾನು ಈ ಜನರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶವನ್ನು ಇವರಿಗೆ ನೀನೇ ಸ್ವಾಧೀನಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:6
36 ತಿಳಿವುಗಳ ಹೋಲಿಕೆ  

ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.


ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.


ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.


“ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಫಿಲಿಷ್ಟಿಯರೇ, ಧೈರ್ಯಗೊಳ್ಳಿ; ಶೂರರಾಗಿರಿ! ಇಲ್ಲವಾದರೆ ನಿಮಗೆ ಗುಲಾಮರಾಗಿದ್ದ ಹಿಬ್ರಿಯರಿಗೆ ನೀವೇ ಗುಲಾಮರಾದೀರಿ; ಆದಕಾರಣ ಶೌರ್ಯದಿಂದ ಯುದ್ಧಮಾಡಿ!” ಎಂದು ಹೇಳಿಕೊಂಡು ಯುದ್ಧಮಾಡಿದರು.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ನಿಮ್ಮ ದೇವರಾದ ಸರ್ವೇಶ್ವರ ಆ ನಾಡನ್ನು ನಿಮಗೇ ಕೊಟ್ಟಿದ್ದಾರೆ; ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ಹೇಳಿದಂತೆ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕು,’ ಎಂದು ಹೇಳಿದೆ.


“ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿ ದಾಟಿ ಆಚೆಯಿರುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;


ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


“ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ನಾಡನ್ನು ಸ್ವಂತ ನಾಡಾಗಿ ಹಂಚಿಕೊಡು.


ನಾನು ಆ ನಾಡನ್ನು ನಿಮಗೆ ಸ್ವಂತ ನಾಡಾಗಲೆಂದು ಕೊಟ್ಟಿದ್ದೇನೆ. ಆದ್ದರಿಂದ ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲೇ ವಾಸಮಾಡಿ.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ನಿಮ್ಮ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿಮ್ಮ ವಿಧಿಗಳನ್ನು ಎದುರಿಸುವವನು ಮರಣ ದಂಡನೆಗೆ ಗುರಿಯಾಗತಕ್ಕವನು. ಆದುದರಿಂದ ಧೈರ್ಯಸ್ಥೈರ್ಯದಿಂದಿರಿ,” ಎಂದರು.


ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.


ಆಗ ಅವನು ಅವರಿಗೆ, “ಅಂಜಬೇಡಿ, ಕಳವಳಗೊಳ್ಳಬೇಡಿ, ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲ ಶತ್ರುಗಳಿಗೂ ಸರ್ವೇಶ್ವರ ಹೀಗೆಯೇ ಮಾಡುವರು,” ಎಂದು ಹೇಳಿದರು.


ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗಿರುವ ಸಿದೋನ್ಯರ ಎಲ್ಲ ಪರ್ವತ ಪ್ರಾಂತ್ಯಗಳು.


ಆದುದರಿಂದ ಯೆಹೋಶುವ ಅವರಿಗೆ, “ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ನಾಡನ್ನು ಸ್ವಾಧೀನ ಮಾಡಿಕೊಳ್ಳಲು ಇನ್ನೆಷ್ಟು ತಡ ಮಾಡುತ್ತಿರುವಿರಿ?


ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು,” ಎಂದು ಹೇಳಿದನು.


ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?


ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀವು ನಮಗೆ ಅನುಗ್ರಹಿಸಿದ ಸೊತ್ತಿನಿಂದ ನಮ್ಮನ್ನು ಹೊರತಳ್ಳುವುದಕ್ಕಾಗಿ, ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು