Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:9 - ಕನ್ನಡ ಸತ್ಯವೇದವು C.L. Bible (BSI)

9 ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:9
33 ತಿಳಿವುಗಳ ಹೋಲಿಕೆ  

ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


ಸರ್ವೇಶ್ವರ ಅವನನ್ನು ದಿಟ್ಟಿಸಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು,” ಎಂದು ಹೇಳಿದರು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.


ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.


ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ, ಅವರಿಗೆ ವಿರುದ್ಧ ಸಾಕ್ಷಿಗಳಾಗುವುದಕ್ಕೆ ಭೂಮ್ಯಾಕಾಶಗಳನ್ನೇ ಕರೆಯುವೆನು.


ನಿಮ್ಮ ದೇವರಾದ ಸರ್ವೇಶ್ವರ ಆ ನಾಡನ್ನು ನಿಮಗೇ ಕೊಟ್ಟಿದ್ದಾರೆ; ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ಹೇಳಿದಂತೆ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕು,’ ಎಂದು ಹೇಳಿದೆ.


ಆಗ ಯೆಹೋಶುವ ಜನಾಧಿಪತಿಗಳಿಗೆ,


ಮೋಶೆಯ ಮಾತುಗಳನ್ನೆಲ್ಲ ಕೇಳಿದಂತೆ ನಿಮ್ಮ ಮಾತುಗಳನ್ನೂ ಕೇಳುತ್ತೇವೆ. ದೇವರಾದ ಸರ್ವೇಶ್ವರ ಮೋಶೆಯ ಸಂಗಡ ಇದ್ದ ಹಾಗೆ ನಿಮ್ಮ ಸಂಗಡವೂ ಇರಲಿ.


ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ಅಂಜಬೇಡ, ಕಳವಳಗೊಳ್ಳಬೇಡ; ಯೋಧರೆಲ್ಲರನ್ನು ನಿನ್ನೊಡನೆ ಕರೆದುಕೊಂಡು ಆಯಿಗೆ ಹೋಗು. ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ನಾಡು ಇವೆಲ್ಲವನ್ನು ನಿನಗೆ ಕೊಟ್ಟಿದ್ದೇನೆ, ಹೋಗು.


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.


ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು,” ಎಂದು ಹೇಳಿದನು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.


ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ನಿಮ್ಮ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿಮ್ಮ ವಿಧಿಗಳನ್ನು ಎದುರಿಸುವವನು ಮರಣ ದಂಡನೆಗೆ ಗುರಿಯಾಗತಕ್ಕವನು. ಆದುದರಿಂದ ಧೈರ್ಯಸ್ಥೈರ್ಯದಿಂದಿರಿ,” ಎಂದರು.


ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ಸರ್ವೇಶ್ವರಸ್ವಾಮಿ ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ನಾಡಿನಲ್ಲೆಲ್ಲಾ ಹರಡಿತು.


ಆಗ ಅವನು ಅವರಿಗೆ, “ಅಂಜಬೇಡಿ, ಕಳವಳಗೊಳ್ಳಬೇಡಿ, ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲ ಶತ್ರುಗಳಿಗೂ ಸರ್ವೇಶ್ವರ ಹೀಗೆಯೇ ಮಾಡುವರು,” ಎಂದು ಹೇಳಿದರು.


ಈ ಗುರುತುಗಳೆಲ್ಲ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ವರ್ತಿಸು, ದೇವರು ನಿನ್ನೊಂದಿಗೆ ಇದ್ದಾರೆ!


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


“ಈ ಜನರು ಮಾಡುವ ಕುತಂತ್ರಕ್ಕೆ ಒಳಗಾಗಬೇಡ. ಅವರು ಯಾವುದಕ್ಕೆ ಭಯಪಡುತ್ತಾರೋ ಅದಕ್ಕೆ ನೀನು ಭಯಪಡಬೇಡ, ನಡುಗಲೂ ಬೇಡ.


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.


ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು