Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:10 - ಕನ್ನಡ ಸತ್ಯವೇದವು C.L. Bible (BSI)

10 ಆ ಅಮೋರಿಯರಲ್ಲಿ ಇಸ್ರಯೇಲರ ಬಗ್ಗೆ ಸರ್ವೇಶ್ವರ ಭಯ ಹುಟ್ಟಿಸಿದರು. ಆದುದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ ಹೋರೋನ್ ಎಂಬ ಮೇಡು ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೆ ಅವರನ್ನು ಹಿಂದಟ್ಟಿ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಇಸ್ರಾಯೇಲ್ಯರ ಮುಂದೆ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಪೂರ್ಣವಾಗಿ ಸೋಲಿಸಿ ಬೇತ್‍ಹೋರೋನ್ ಎಂಬ ಗಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಸ್ರೇಲರು ಧಾಳಿಮಾಡಿದಾಗ ಯೆಹೋವನು ಆ ಶತ್ರು ಸೈನ್ಯವನ್ನು ಗಾಬರಿಗೊಳಿಸಿದನು. ಆದ್ದರಿಂದ ಇಸ್ರೇಲಿನ ಸೈನಿಕರು ಅವರನ್ನು ಸೋಲಿಸಿ ಮಹಾವಿಜಯವನ್ನು ಸಾಧಿಸಿದರು. ಇಸ್ರೇಲರು ಶತ್ರುಗಳನ್ನು ಗಿಬ್ಯೋನಿನಿಂದ ಬೇತ್‌ಹೋರೋನಿಗೆ ಹೋಗುವ ದಾರಿಯವರೆಗೂ ಬೆನ್ನಟ್ಟಿದರು. ಇಸ್ರೇಲರು ಅಜೇಕ ಮತ್ತು ಮಕ್ಕೇದದವರೆಗೆ ಅವರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:10
29 ತಿಳಿವುಗಳ ಹೋಲಿಕೆ  

ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II


ಎಫ್ರಯಿಮ್ ಗೋತ್ರಗಳ ನಾಡಿನ ದಕ್ಷಿಣ ದಿಕ್ಕಿನ ಎಲ್ಲೆ ಆಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ತೊಡಗಿ ಮೇಲಿನ ಬೇತ್ ಹೋರೋನಿನ ಮೇಲೆ ಸಮುದ್ರ ತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. ಅದರ ಉತ್ತರ ದಿಕ್ಕಿನ ಎಲ್ಲೆ ಮಿಕ್ಮೆತಾತ್ ಎಂಬಲ್ಲಿ ತೊಡಗಿ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.


ಅಲ್ಲಿಂದ ಇಳಿದು ದಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನಿನ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.


ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;


ಸರ್ವೇಶ್ವರ ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ತುತ್ತಾಗಿಸಿದರು. ಸೀಸೆರನು ರಥದಿಂದ ಹಾರಿ ಓಡಿಹೋದನು.


ತಪ್ಪೂಹ, ಏನಾಮ್, ಯರ್ಮೂತ್,


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ಆಗ ಬಾಬಿಲೋನಿನ ಅರಸನ ಸೈನ್ಯವು ಜೆರುಸಲೇಮಿಗೂ ಮತ್ತು ಜುದೇಯದೊಳಗೆ ಕೋಟೆಕೊತ್ತಲದ ನಗರಗಳಾಗಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧ ಯುದ್ಧಮಾಡುತ್ತಿತ್ತು.


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಸರ್ವೇಶ್ವರ ಅರಸನಿಂದಲೂ ಯೆಹೂದ್ಯರಿಂದಲೂ ಸುಡಾನರಿಗೆ ಅಪಜಯ ಉಂಟಾಗುವಂತೆ ಮಾಡಿದರು.


ಇನ್ನೊಂದು ಬೇತ್‍ಹೋರೋನಿನ ಕಡೆಗೆ, ಮತ್ತೊಂದು ಜೆಬೋಯೀಮ್ ಕಣಿವೆಯೂ ಅದರ ಕೆಳಗಿರುವ ಅರಣ್ಯವೂ ಕಾಣಿಸುವ ಸ್ಥಳಕ್ಕೆ ಹೋದವು.


ಗೆಜೆರ್, ಕಿದ್ ಚೈಮ್ ಹಾಗೂ ಬೇತ್ ಹೋರೋನ್ ಎಂಬ ಗೋಮಾಳಸಹಿತವಾದ ನಾಲ್ಕು ನಗರಗಳು,


ಮಕ್ಕೇದಾ ಎಂಬ ಹದಿನಾರು ನಗರಗಳು, ಅವುಗಳ ಗ್ರಾಮಗಳು;


ಮಕ್ಕೇದದ ಅರಸ - 1 ಬೇತೇಲಿನ ಅರಸ - 1


ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.


ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.


ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿ ಉಂಟುಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವರು.


ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣ ಮಾಡಿ ತಟ್ಟನೆ ಅವರ ಮೇಲೆ ಬಿದ್ದನು.


ಯೆಹೂದ ಪ್ರಾಂತ್ಯದ ಸೋಕೋವಿನಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸೈನ್ಯವನ್ನು ಜಮಾಯಿಸಿದ್ದರು. ಸೋಕೋವಿಗೂ ಅಜೇಕಕ್ಕೂ ಮಧ್ಯೆಯಿರುವ ಎಫೆಸ್ದಮ್ಮೀಮಿನಲ್ಲಿ ಬೀಡುಬಿಟ್ಟಿದ್ದರು.


ಚದರಿಸಿದನು ಶತ್ರುಗಳನು ಬಾಣಗಳನೆಸೆದು ತಳಮಳಗೊಳಿಸಿದನವರನು ಸಿಡಿಲನು ಹೊಡೆದು.


ಗೆಜೆರ್ ಪಟ್ಟಣವನ್ನು ಬಿಟ್ಟು ಕೆಳಗಿನ ಬೇತ್-ಹೋರೋನ್,


ಸರ್ವಶಕ್ತನು ಅರಸರನತ್ತ ಸದೆಬಡಿದಂತೆ I ಇತ್ತ ಬೀಳುತ್ತಿತ್ತು ಸಾಲ್ಮೋನ್ ಗಿರಿಮೇಲೆ ಹಿಮಗಡ್ಡೆ II


ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಛರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರು ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ಕದನವಾಡಿದವು ತಾರೆಗಳು ಆಗಸದಿಂದಲೆ ಯುದ್ಧಮಾಡಿದವು ಸೀಸೆರನ ವಿರುದ್ಧ ತಮ್ಮಾ ಪಥದಿಂದಲೆ.


ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು, ಸಮಾರಿಯಾಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಜುದೇಯ ಪಟ್ಟಣಗಳ ಮೇಲೆ ದಾಳಿಮಾಡಿ, ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಅನಂತರ ಪೂರ್ವಕಾಲದಲ್ಲಿ ನಡೆದಂತೆ, ಸರ್ವೇಶ್ವರ ಹೊರಟುಬಂದು ಆ ರಾಷ್ಟ್ರಗಳಿಗೆ ವಿರುದ್ಧವಾಗಿ ಪ್ರತಿಭಟಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು