Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:12
29 ತಿಳಿವುಗಳ ಹೋಲಿಕೆ  

ಹಾರಿ ಓಡುವ ನಿನ್ನ ಬಾಣಗಳ ಬೆಳಕಿಗೆ ಥಳಥಳಿಸುವ ನಿನ್ನ ಈಟಿಯ ಹೊಳಪಿಗೆ ಸೂರ್ಯಚಂದ್ರ ಅಡಗುತ್ತವೆ ಗೂಡಿನೊಳಗೆ.


ಇಗೋ, ಅಹಾಜನು ಕಟ್ಟಿಸಿದ ನೆರಳು ಗಡಿಯಾರದಲ್ಲಿ ಸೂರ್ಯನ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡುವರು,” ಎಂದು ತಿಳಿಸಿದನು. ಅಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.


ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.


ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;


ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ I ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ II


ಇಸ್ರಯೇಲರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಇದನ್ನು ‘ಯಾಷಾರ್’ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯ ಮುಳುಗಲು ಆತುರಪಡದೆ ಹೆಚ್ಚುಕಡಿಮೆ ಒಂದು ದಿನವೆಲ್ಲ ಆಕಾಶದ ಮಧ್ಯದಲ್ಲೆ ನಿಂತಿತು.


ಸೂರ್ಯಚಂದ್ರರೇ, ಹೊಗಳಿ ಆತನನು I ಮಿನುಗುವ ತಾರೆಗಳೇ, ಹೊಗಳಿ ಆತನನು II


ಆತ ಆಜ್ಞೆ ಮಾಡಿದ್ದೇ ಆದರೆ ಸೂರ್ಯನು ಉದಯಿಸನು ಮುದ್ರೆ ಹಾಕಿದ್ದೇ ಆದರೆ ನಕ್ಷತ್ರವೂ ಮಿನುಗದು.


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II


ಈರ್ಷೆಮೆಷ್, ಶಾಲಬ್ಬೀನ್, ಅಯ್ಯಾಲೋನ್,


ಅನ್ಯ ದೇವರುಗಳನ್ನಾಗಲಿ, ಪೂಜಿಸಬಾರದೆಂದು ನಿಷೇಧಿಸಿರುವ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ, ಪೂಜಿಸಿ, ಆರಾಧಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದುಷ್ಟವಾದುದನ್ನು ನಡೆಸಿದ್ದಾರೆ ಎಂದೂ


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.


ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು.


ಕದನವಾಡಿದವು ತಾರೆಗಳು ಆಗಸದಿಂದಲೆ ಯುದ್ಧಮಾಡಿದವು ಸೀಸೆರನ ವಿರುದ್ಧ ತಮ್ಮಾ ಪಥದಿಂದಲೆ.


ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.


ಒಂದು ದಿನ ನೇರನ ಮಗ ಅಬ್ನೇರನು ಮತ್ತು ಸೌಲನ ಮಗ ಈಷ್ಬೋಶೆತನ ಸೇವಕರು ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.


ಆಗ ಪ್ರವಾದಿ ಯೆಶಾಯನು ಸರ್ವೇಶ್ವರನಿಗೆ ಮೊರೆಯಿಡಲು ಅವರು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದರು.


ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -


“ಆದರೂ ನನ್ನ ಜನರೇ, ನಿಮಗೆ ಎದುರಾಗಿ ನಿಂತ ಅಮೋರ್ಯದವರನ್ನು ಧ್ವಂಸಮಾಡಿದೆನು. ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ ನಿಮ್ಮ ಶತ್ರು ಅಮೋರ್ಯದವರನ್ನು ನಾಶಪಡಿಸಿದೆನು. ಮರದ ಮುಡಿಯಿಂದ ಫಲವನ್ನೂ ಅಡಿಯಿಂದ ಬೇರನ್ನೂ ಕಿತ್ತುಹಾಕುವಂತೆ ಅವರನ್ನು ನಿರ್ಮೂಲಮಾಡುವೆನು.


ಅಯ್ಯಾಲೋನ್, ಗತ್ ರಿಮ್ಮೋನ್ ಎಂಬ ಗೋಮಾಳಸಹಿತವಾದ ನಾಲ್ಕು ಪಟ್ಟಣಗಳು,


ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು,


ಅವನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಸರ್ವೇಶ್ವರನಿಂದ ಗುರುತು ಕೇಳುತ್ತಿರುವೆ; ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು,” ಎಂದನು.


ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ; ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು,” ಎಂದು ಹೇಳಿದನು.


ಗತ್ ಪಟ್ಟಣದ ಜನರನ್ನು ಹೊಡೆದೋಡಿಸಿ ಅಲ್ಲಿ ನೆಲೆಸಿದ ಹಾಗು ಅಯ್ಯಾಲೋನ್ ಪಟ್ಟಣದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು - ಬೆರೀಯ ಮತ್ತು ಶಮ ಎಂಬವರು.


ಅಜೇಕ, ಚೊರ್ಗ, ಅಯ್ಯಾಲೋನ್ ಹಾಗೂ ಹೆಬ್ರೋನ್. ಕೋಟೆಕೊತ್ತಲಗಳಿಂದ ಕೂಡಿದ್ದ ಈ ಪಟ್ಟಣಗಳು ಯೆಹೂದ-ಬೆನ್ಯಾಮೀನ್ ಕುಲ ಪ್ರಾಂತ್ಯಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು