ಯೆಹೋಶುವ 10:28 - ಕನ್ನಡ ಸತ್ಯವೇದವು C.L. Bible (BSI)28 ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದೇ ದಿವಸ ಯೆಹೋಶುವನು ಮಕ್ಕೇದ ಊರನ್ನು ಹಿಡಿದುಕೊಂಡು ಅದನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಇದರ ಅರಸನಿಗೂ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು. ಅಧ್ಯಾಯವನ್ನು ನೋಡಿ |