Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:3 - ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಹೆಬ್ರೋನಿನ ಅರಸ ಹೋಹಾಮ್, ಯರ್ಮೂತಿನ ಅರಸ ಪಿರಾಮ್, ಲಾಕೀಷಿನ ಅರಸ ಯಾಫೀಯ, ಎಗ್ಲೋನಿನ ಅರಸ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜೆರುಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರುಸಲೇಮಿನ ಅರಸನು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ದೂತರನ್ನು ಕಳುಹಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:3
19 ತಿಳಿವುಗಳ ಹೋಲಿಕೆ  

ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.


ಮಾರೇಷ, ಜೀಫ್, ಅದೋರೈಮ್, ಲಾಕೀಷ್,


ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಆಗ ಜುದೇಯದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ಅಪರಾಧಿ; ತಾವು ನನ್ನನ್ನು ಬಿಟ್ಟುಹೋಗಬೇಕು; ತಾವು ನನಗೆ ವಿಧಿಸುವಷ್ಟನ್ನೂ ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಅಸ್ಸೀರಿಯದ ಅರಸನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.


ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿ ಏಳು ವರ್ಷ ಆರು ತಿಂಗಳು ರಾಜ್ಯವಾಳಿದನು.


ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.


ಅಂತೆಯೇ ಜೆರುಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ನಗರಗಳ ಐದುಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದರು. ಗಿಬ್ಯೋನಿಗೆ ಮುತ್ತಿಗೆ ಹಾಕಿ ಯುದ್ಧಮಾಡಿದರು.


ಯೆಹೋಶುವನು ಆಯಿ ನಗರವನ್ನು ಅದರ ಅರಸನನ್ನು ಹಿಡಿದು ಜೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆ ಸಂಹರಿಸಿಬಿಟ್ಟನೆಂದು ಜೆರುಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.


ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)


ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, "ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.


ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.


ಅವರು ಹೋಗಿ ಜೆರುಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್ ಮತ್ತು ಎಗ್ಲೋನ್ ಎಂಬ ನಗರಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಅವನ ಬಳಿಗೆ ತಂದರು.


ಆಗ ಬಾಬಿಲೋನಿನ ಅರಸನ ಸೈನ್ಯವು ಜೆರುಸಲೇಮಿಗೂ ಮತ್ತು ಜುದೇಯದೊಳಗೆ ಕೋಟೆಕೊತ್ತಲದ ನಗರಗಳಾಗಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧ ಯುದ್ಧಮಾಡುತ್ತಿತ್ತು.


ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಯೇಲರೆಲ್ಲರ ಸಹಿತ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು