Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:30 - ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರ ಅದನ್ನೂ ಅದರ ಅರಸನನ್ನೂ ಇಸ್ರಯೇಲರ ಕೈವಶಮಾಡಿದರು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಗೆ ತುತ್ತಾಗಿಸಿದರು. ಜೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈಗೆ ಕೊಟ್ಟನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇದರ ಅರಸನಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಸ್ರೇಲರು ಆ ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಆ ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದುಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೊ ನಗರದ ಅರಸನಿಗೆ ಮಾಡಿದಂತೆಯೇ ಆ ಅರಸನಿಗೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೆಹೋವ ದೇವರು ಲಿಬ್ನವನ್ನೂ, ಅದರ ಅರಸನನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟರು. ಯೆಹೋಶುವನು ಅದನ್ನೂ, ಅದರಲ್ಲಿರುವ ಎಲ್ಲರನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಖಡ್ಗದಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:30
12 ತಿಳಿವುಗಳ ಹೋಲಿಕೆ  

ಯೆಹೋಶುವನು ಜನರೆಲ್ಲರ ಸಮೇತ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.


ಅಲ್ಲಿಂದ ಯೆಹೋಶುವನು ಇಸ್ರಯೇಲರ ಸಹಿತ ಲಾಕೀಷಿಗೆ ಹೋಗಿ ಮುತ್ತಿಗೆ ಹಾಕಿ ಯುದ್ಧಮಾಡಿದನು.


ತರುವಾಯ ನೀವು ಹಿಂದಿರುಗಿ ಬರಬಹುದು. ಆಗ ಸರ್ವೇಶ್ವರನ ಮುಂದೆ, ಇಸ್ರಯೇಲರ ಮುಂದೆ ನಿರ್ದೋಷಿಗಳಾಗುವಿರಿ, ಮಾತ್ರವಲ್ಲ ಈ ಪ್ರದೇಶ ಸರ್ವೇಶ್ವರನ ಸನ್ನಿಧಿಯಲ್ಲೇ ನಿಮಗೆ ಸೇರಿದ ಸೊತ್ತಾಗುವುದು.


ನಮ್ಮ ದೇವರಾದ ಸರ್ವೇಶ್ವರ ಅವನನ್ನು ನಮ್ಮಿಂದ ಪರಾಜಯ ಪಡಿಸಿದರು. ನಾವು ಅವನನ್ನು, ಅವನ ಮಕ್ಕಳನ್ನು ಹಾಗು ಜನರೆಲ್ಲರನ್ನು ಸದೆಬಡಿದೆವು.


ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


ಇಸ್ರಯೇಲರು ತಮ್ಮನ್ನು ಅರಣ್ಯದವರೆಗೂ ಬೆನ್ನಟ್ಟಿ ಬಂದ ಆಯಿ ಜನರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರು ನಗರಕ್ಕೆ ಹೋಗಿ ಅಲ್ಲಿದ್ದವರನ್ನೂ ಕೊಂದರು.


ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.


ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.


ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.


ಲಿಬ್ನದ ಅರಸ - 1 ಅದುಲ್ಲಾಮದ ಅರಸ - 1


ಅನಂತರ ಅವನು ಜೆಸ್ರೀಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು’ ಒಬ್ಬನನ್ನೂ ಉಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು