Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:32 - ಕನ್ನಡ ಸತ್ಯವೇದವು C.L. Bible (BSI)

32 ಸರ್ವೇಶ್ವರ ಇದನ್ನೂ ಇಸ್ರಯೇಲರ ಕೈಗೊಪ್ಪಿಸಿದರು. ಎಂದೇ ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ, ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದದರಿಂದ ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಇಸ್ರೇಲರ ಜನರು ಲಾಕೀಷ್ ಪಟ್ಟಣವನ್ನು ವಶಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಅವರು ಎರಡನೆಯ ದಿನ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಹಾಕಿದರು. ಅವರು ಲಿಬ್ನ ಪಟ್ಟಣಕ್ಕೆ ಮಾಡಿದಂತೆ ಇದಕ್ಕೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರು ಲಾಕೀಷನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಅವರು ಅದನ್ನು ಎರಡನೆಯ ದಿವಸದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲರನ್ನು ಖಡ್ಗದಿಂದ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:32
7 ತಿಳಿವುಗಳ ಹೋಲಿಕೆ  

ಅಲ್ಲಿಂದ ಯೆಹೋಶುವನು ಇಸ್ರಯೇಲರ ಸಹಿತ ಲಾಕೀಷಿಗೆ ಹೋಗಿ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.


ಅಸ್ಸೀರಿಯದ ಸೇನಾಪತಿಯು ತನ್ನ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.


ಹೀಗೆ ಯೆಹೋಶುವನು ಅಮಾಲೇಕ್ಯರ ಯೋಧರನ್ನು ಕತ್ತಿಗೆ ತುತ್ತಾಗಿಸಿ ಅವರನ್ನು ಸೋಲಿಸಿದನು.


ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.


ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು