Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:37 - ಕನ್ನಡ ಸತ್ಯವೇದವು C.L. Bible (BSI)

37 ಅದಕ್ಕೂ ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಗೆ ಈಡಾಗಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ. ನಗರವನ್ನೂ ಜನರನ್ನೂ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ಹೆಬ್ರೋನ್ ಪಟ್ಟಣವನ್ನೂ ಅದರ ರಾಜನನ್ನೂ ಮತ್ತು ಅದರ ಸಮೀಪದಲ್ಲಿದ್ದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದ ಎಲ್ಲರನ್ನೂ ಕೊಂದರು. ಅಲ್ಲಿ ಯಾರೊಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಅವರು ಎಗ್ಲೋನಿನಲ್ಲಿ ಮಾಡಿದಂತೆಯೇ ಇಲ್ಲಿಯೂ ಮಾಡಿದರು. ಅವರು ಪಟ್ಟಣವನ್ನು ನಾಶಮಾಡಿದರು ಮತ್ತು ಅಲ್ಲಿದ್ದ ಎಲ್ಲ ಜನರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಹೆಬ್ರೋನನ್ನು ಹಿಡಿದು ಅದನ್ನೂ, ಅದರ ಅರಸನನ್ನೂ ಅದರ ಸಮಸ್ತ ಊರುಗಳನ್ನೂ ಅವುಗಳಲ್ಲಿರುವ ಸಮಸ್ತ ಜನರನ್ನೂ ಖಡ್ಗದಿಂದ ಸದೆಬಡಿದು ಎಗ್ಲೋನಿಗೆ ಮಾಡಿದ ಹಾಗೆ ಒಬ್ಬರನ್ನೂ ಉಳಿಸದೆ, ಅದನ್ನೂ, ಅದರಲ್ಲಿರುವ ಎಲ್ಲರನ್ನೂ ಸಂಪೂರ್ಣ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:37
8 ತಿಳಿವುಗಳ ಹೋಲಿಕೆ  

ಅನಂತರ ಯೆಹೋಶುವನು ಮತ್ತು ಇಸ್ರಯೇಲರು ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರುದ್ಧ ಯುದ್ಧಮಾಡಿದರು.


ಅಲ್ಲಿಂದ ಯೆಹೋಶುವನು ಹಾಗು ಎಲ್ಲ ಇಸ್ರಯೇಲರು ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿದರು.


ಹೀಗೆ ಯೆಹೋಶುವನು ಅಮಾಲೇಕ್ಯರ ಯೋಧರನ್ನು ಕತ್ತಿಗೆ ತುತ್ತಾಗಿಸಿ ಅವರನ್ನು ಸೋಲಿಸಿದನು.


ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.


ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನಲ್ಲಿ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕೊಂದು ನಾಶಮಾಡಿದರು.


ಅದನ್ನು ಹಾಗು ಅದಕ್ಕೆ ಸೇರಿದ ಊರುಗಳನ್ನು ಹಿಡಿದುಕೊಂಡರು. ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ನಾಶಮಾಡಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.


ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.


ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು