ಯೆಹೋಶುವ 10:39 - ಕನ್ನಡ ಸತ್ಯವೇದವು C.L. Bible (BSI)39 ಅದನ್ನು ಹಾಗು ಅದಕ್ಕೆ ಸೇರಿದ ಊರುಗಳನ್ನು ಹಿಡಿದುಕೊಂಡರು. ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ನಾಶಮಾಡಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಅವರು ಆ ಪಟ್ಟಣವನ್ನೂ ಅದರ ಅರಸನನ್ನೂ ದೆಬೀರಿನ ಸಮೀಪದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಅವರು ಆ ಪಟ್ಟಣದಲ್ಲಿದ್ದ ಎಲ್ಲರನ್ನು ಕೊಂದರು. ಅಲ್ಲಿ ಯಾರೊಬ್ಬರೂ ಸಜೀವವಾಗಿ ಉಳಿಯಲಿಲ್ಲ. ಇಸ್ರೇಲರು ಹೆಬ್ರೋನ್ ಮತ್ತು ಅದರ ಅರಸನಿಗೆ ಮಾಡಿದಂತೆಯೇ ದೆಬೀರ್ ಮತ್ತು ಅದರ ಅರಸನಿಗೆ ಮಾಡಿದರು. ಲಿಬ್ನ ಮತ್ತು ಅದರ ಅರಸನಿಗೂ ಹೀಗೆಯೇ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ದೆಬೀರನ್ನೂ ಅದರ ಅರಸನನ್ನೂ, ಅದರ ಸಮಸ್ತ ಊರುಗಳನ್ನೂ ಹಿಡಿದು ಅವುಗಳನ್ನು ಖಡ್ಗದಿಂದ ದಾಳಿಮಾಡಿ, ಒಬ್ಬರನ್ನೂ ಉಳಿಸದೆ ಅದರಲ್ಲಿದ್ದ ಎಲ್ಲರನ್ನೂ, ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು. ಅಧ್ಯಾಯವನ್ನು ನೋಡಿ |