ಯೆಹೋಶುವ 10:40 - ಕನ್ನಡ ಸತ್ಯವೇದವು C.L. Bible (BSI)40 ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಹೀಗೆ ಯೆಹೋಶುವನು ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಪೂರ್ವದ ಇಳಕಲಿನ ಪ್ರದೇಶ, ಈ ಎಲ್ಲ ಪ್ರದೇಶಗಳ ಅರಸರನ್ನು ಸೋಲಿಸಿದನು. ಇಸ್ರೇಲಿನ ದೇವರಾದ ಯೆಹೋವನು ಎಲ್ಲಾ ಜನರನ್ನು ಕೊಲ್ಲು ಎಂದು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಆ ಸ್ಥಳಗಳಲ್ಲಿ ಯಾರೊಬ್ಬರನ್ನೂ ಸಜೀವವಾಗಿ ಉಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು. ಅಧ್ಯಾಯವನ್ನು ನೋಡಿ |