Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:9 - ಕನ್ನಡ ಸತ್ಯವೇದವು C.L. Bible (BSI)

9 ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣ ಮಾಡಿ ತಟ್ಟನೆ ಅವರ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋಶುವನು ಮತ್ತು ಅವನ ಸೈನ್ಯದವರು ಇಡೀರಾತ್ರಿ ಗಿಬ್ಯೋನಿನ ಕಡೆಗೆ ಪ್ರಯಾಣ ಮಾಡಿದರು. ಯೆಹೋಶುವನು ಬರುತ್ತಿದ್ದಾನೆಂಬುದು ವೈರಿಗಳಿಗೆ ಗೊತ್ತಿರಲಿಲ್ಲ. ಯೆಹೋಶುವನು ಅವರ ಮೇಲೆ ಧಾಳಿ ಮಾಡಿದಾಗ ಅವರಿಗೆ ಅತ್ಯಾಶ್ಚರ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣಮಾಡಿ, ತಕ್ಷಣವೇ ಅವರ ಮೇಲೆ ದಾಳಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:9
9 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ನಿಷ್ಠಾವಂತ ಸೈನಿಕನಂತೆ ಕಷ್ಟದುಃಖಗಳನ್ನು ತಾಳ್ಮೆಯಿಂದ ಸಹಿಸಿಕೋ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.


ಆ ಅಮೋರಿಯರಲ್ಲಿ ಇಸ್ರಯೇಲರ ಬಗ್ಗೆ ಸರ್ವೇಶ್ವರ ಭಯ ಹುಟ್ಟಿಸಿದರು. ಆದುದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ ಹೋರೋನ್ ಎಂಬ ಮೇಡು ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೆ ಅವರನ್ನು ಹಿಂದಟ್ಟಿ ಸಂಹರಿಸಿದನು.


ಯೆಹೋಶುವನು ತನ್ನ ಎಲ್ಲ ಯೋಧರೊಡನೆ ಹೊರಟು ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು