Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:1 - ಕನ್ನಡ ಸತ್ಯವೇದವು C.L. Bible (BSI)

1 ಹಾಚೋರಿನ ಅರಸ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮದೋನಿನ ಅರಸನಿಗೂ ಶಿಮ್ರೋನಿನ ಅರಸನಿಗೂ ಹಾಗು ಅಕ್ಷಾಫಿನ ಅರಸನಿಗೂ ಕರೆಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು ಶಿಮ್ರೋನಿನ ಅರಸನನ್ನು ಅಕ್ಷಾಫಿನ ಅರಸನನ್ನು, ಉತ್ತರ ದಿಕ್ಕಿನ ಪರ್ವತ ಪ್ರದೇಶ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು, ಶಿಮ್ರೋನಿನ ಅರಸನು, ಅಕ್ಷಾಫಿನ ಅರಸನು ಇವರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹಾಚೋರಿನ ಅರಸನಾದ ಯಾಬೀನನು ನಡೆದ ಎಲ್ಲ ಸಂಗತಿಗಳ ಬಗ್ಗೆ ಕೇಳಿದನು. ಅದಕ್ಕಾಗಿ ಅವನು ಅನೇಕ ಅರಸರ ಸೈನ್ಯಗಳನ್ನು ಒಟ್ಟಿಗೆ ಸೇರಿಸುವ ನಿರ್ಧಾರವನ್ನು ಮಾಡಿದನು. ಮಾದೋನಿನ ಅರಸನಾದ ಯೋಬಾಬನಿಗೆ, ಶಿಮ್ರೋನಿನ ಅರಸನಿಗೆ, ಅಕ್ಷಾಫಿನ ಅರಸನಿಗೆ ಯಾಬೀನನು ಸಂದೇಶವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ, ಸಮೀಪ ರಾಜ್ಯಗಳ ಅರಸರಿಗೆ ಒಂದು ಸಂದೇಶವನ್ನು ಕಳುಹಿಸಿದನು: ಎಂದರೆ ಮಾದೋನಿನ ಅರಸನಾದ ಯೋಬಾಬನಿಗೂ ಶಿಮ್ರೋನಿನ ಅರಸನಿಗೂ ಅಕ್ಷಾಫಿನ ಅರಸನಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:1
19 ತಿಳಿವುಗಳ ಹೋಲಿಕೆ  

ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಏಕೆಂದರೆ ಹಾಚೋರ್ ಪೂರ್ವಕಾಲದಲ್ಲಿ ಆ ರಾಜ್ಯಗಳಲ್ಲೆಲ್ಲಾ ಶ್ರೇಷ್ಠವಾದುದು.


ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಹಾಚೋರಿನ ಅರಸ ಯೂಬೀನನಿಗೂ ಕೇನ್ಯನದ ಹೆಬೆರನ ಮನೆಯವರಿಗೂ ಸಮಾಧಾನ ಇದ್ದುದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.


ರಕ್ಕತ್, ಕಿನ್ನೆರೆತ್, ಅದಾಮಾ, ರಾಮಾ, ಹಾಚೋರ್,


ಮಾದೋನಿನ ಅರಸ - 1 ಹಾಚೋರಿನ ಅರಸ - 1 ಶಿಮ್ರೋನ್ಮೆರೋನಿನ ಅರಸ - 1


ಇದಾದ ಮೇಲೆ ಯೆಹೋಶುವನು ಎಲ್ಲ ಇಸ್ರಯೇಲರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.


ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ಬಿನ್ ಹೆಸೆದ್ - ಅರುಬ್ಬೋತ್ (ಸೋಕೋಹೇಫೆರ್ ಎಂಬ ಪ್ರದೇಶಗಳು ಅವನ ವಶದಲ್ಲಿದ್ದವು).


ಸರ್ವೇಶ್ವರನ ಆಲಯ, ಅರಮನೆ, ಮಿಲ್ಲೋಕೋಟೆ, ಜೆರುಸಲೇಮಿನ ಪೌಳಿಗೋಡೆ, ಹಾಚೋರ್, ಮೆಗಿದ್ದೋ ಹಾಗು ಗೆಜೆರ್ ಇವುಗಳನ್ನು ಸೊಲೊಮೋನನು ಬಿಟ್ಟೀಕೆಲಸದವರಿಂದ ಕಟ್ಟಿಸಿದನು.


ಯೆಹೋಶುವನಿಗೂ ಇಸ್ರಯೇಲರಿಗೂ ವಿರುದ್ಧ ಯುದ್ಧಮಾಡಬೇಕೆಂದು ಒಮ್ಮನಸ್ಸಿನಿಂದ ಕೂಡಿಕೊಂಡರು.


ಅಕ್ಷಾಫಿನ ಅರಸ - 1 ತಾನಕದ ಅರಸ - 1


ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾದಾಗ ಅವರೆಲ್ಲರೂ ಕೂಡಿಬಂದರು.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು