Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:19 - ಕನ್ನಡ ಸತ್ಯವೇದವು C.L. Bible (BSI)

19 ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತು ಯಾವ ನಗರದವರೂ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಳ್ಳಲಿಲ್ಲ. ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲ್ಯರೊಡನೆ ಒಪ್ಪಂದ ಮಾಡಿಕೊಳ್ಳಲಿಲ್ಲ. ಎಲ್ಲರನ್ನೂ ಯುದ್ಧದಿಂದ ವಶಮಾಡಿಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಪ್ರದೇಶದಲ್ಲಿ ಕೇವಲ ಒಂದು ಪಟ್ಟಣ ಮಾತ್ರ ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿತ್ತು. ಅದೇ ಹಿವ್ವಿಯರ ಗಿಬ್ಯೋನ್ ಪಟ್ಟಣ. ಉಳಿದೆಲ್ಲ ಪಟ್ಟಣಗಳು ಯುದ್ಧದಲ್ಲಿ ಸೋತುಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ. ಅವರು ಬೇರೆ ಎಲ್ಲವುಗಳನ್ನು ಯುದ್ಧಮಾಡಿ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:19
3 ತಿಳಿವುಗಳ ಹೋಲಿಕೆ  

ಯೆಹೋಶುವ ಈ ಎಲ್ಲಾ ಅರಸರೊಡನೆ ಬಹುದಿನಗಳ ತನಕ ಯುದ್ಧಮಾಡಿದನು.


ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು