Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:21 - ಕನ್ನಡ ಸತ್ಯವೇದವು C.L. Bible (BSI)

21 ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್ ಹಾಗೂ ಅನಾಬ್ ಎಂಬ ಊರುಗಳಲ್ಲೂ, ಜುದೇಯ ಮತ್ತು ಇಸ್ರಯೇಲ್ ಪ್ರಾಂತ್ಯಗಳ ಬೆಟ್ಟಗುಡ್ಡಗಳಲ್ಲೂ ಇದ್ದ ‘ಅನಾಕಿಮ್’ ಜನರನ್ನು ನಾಶಮಾಡಿ ಅವರ ನಗರಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಮತ್ತು ಇಸ್ರಾಯೇಲ್ ಪ್ರಾಂತಗಳ ಬೆಟ್ಟಗಳಲ್ಲಿಯೂ ಇದ್ದ ಉನ್ನತಪುರುಷರನ್ನು ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಅನಾಕ ವಂಶಸ್ಥರು ಹೆಬ್ರೋನ್, ದೆಬೀರ್, ಅನಾಬ್ ಮತ್ತು ಯೆಹೂದ ಬೆಟ್ಟಪ್ರದೇಶಗಳಲ್ಲಿ ವಾಸವಾಗಿದ್ದರು. ಯೆಹೋಶುವನು ಈ ಅನಾಕ ವಂಶಸ್ಥರೊಂದಿಗೆ ಯುದ್ಧ ಮಾಡಿದನು. ಯೆಹೋಶುವನು ಆ ಎಲ್ಲ ಜನರನ್ನು ಮತ್ತು ಊರುಗಳನ್ನು ನಾಶಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ, ದೆಬೀರಿನಲ್ಲಿಯೂ, ಅನಾಬಿನಲ್ಲಿಯೂ, ಯೆಹೂದದ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲ್ ಪ್ರಾಂತದ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯರನ್ನು ಕಡಿದುಬಿಟ್ಟು, ಅವರನ್ನೂ, ಅವರ ಪಟ್ಟಣಗಳನ್ನೂ ಪೂರ್ಣವಾಗಿ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:21
18 ತಿಳಿವುಗಳ ಹೋಲಿಕೆ  

ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ.


ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.


“ಆದರೂ ನನ್ನ ಜನರೇ, ನಿಮಗೆ ಎದುರಾಗಿ ನಿಂತ ಅಮೋರ್ಯದವರನ್ನು ಧ್ವಂಸಮಾಡಿದೆನು. ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ ನಿಮ್ಮ ಶತ್ರು ಅಮೋರ್ಯದವರನ್ನು ನಾಶಪಡಿಸಿದೆನು. ಮರದ ಮುಡಿಯಿಂದ ಫಲವನ್ನೂ ಅಡಿಯಿಂದ ಬೇರನ್ನೂ ಕಿತ್ತುಹಾಕುವಂತೆ ಅವರನ್ನು ನಿರ್ಮೂಲಮಾಡುವೆನು.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.


ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಅವರು ಬಲಿಷ್ಠರು, ಬಹುಜನರು ಹಾಗು ಅನಾಕಿಮರಂತೆ ಎತ್ತರದವರೂ ಆಗಿದ್ದರು.


ಅಲ್ಲಿ ‘ನೆಫೀಲಿಯರನ್ನು’ ಅಂದರೆ ನೆಫೀಲಿಯನ ವಂಶದವರಾದ ‘ಅನಕಿಮ್’ರನ್ನು ನೋಡಿದೆವು. ಅವರ ಮುಂದೆ ನಾವು ಮಿಡತೆಗಳಂತೆ ಇದ್ದೆವು. ಅವರಿಗೂ ನಾವು ಹಾಗೆಯೆ ಕಾಣಿಸಿಕೊಂಡೆವು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು