ಯೆಹೋಶುವ 11:4 - ಕನ್ನಡ ಸತ್ಯವೇದವು C.L. Bible (BSI)4 ಅವರು ಒಡನೆ ಬಹುರಥಾಶ್ವಗಳಿಂದ ಕೂಡಿದ್ದ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರತೀರದ ಮರಳಿನಂತೆ ಅಸಂಖ್ಯರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹೀಗಾಗಿ ಈ ಎಲ್ಲ ಅರಸರ ಸೈನ್ಯಗಳು ಒಟ್ಟುಗೂಡಿದವು. ಈ ಮಹಾಸೈನ್ಯದಲ್ಲಿ ಅಸಂಖ್ಯಾತ ಯೋಧರಿದ್ದರು, ಕುದುರೆಗಳಿದ್ದವು ಮತ್ತು ರಥಗಳಿದ್ದವು. ಸಮುದ್ರತೀರದ ಮರಳು ಕಣಗಳಷ್ಟೇ ಅಸಂಖ್ಯಾತ ಯೋಧರು ಆ ಸೈನ್ಯದಲ್ಲಿರುವಂತೆ ಕಾಣುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರೆಲ್ಲರು ಸಮುದ್ರ ದಡದ ಮರಳಿನ ಹಾಗೆ ಅಸಂಖ್ಯರಾಗಿದ್ದರು. ಅವರು ಬಹು ರಥಗಳೂ ಕುದುರೆಗಳೂ ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು. ಅಧ್ಯಾಯವನ್ನು ನೋಡಿ |