Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:9 - ಕನ್ನಡ ಸತ್ಯವೇದವು C.L. Bible (BSI)

9 ಯೆಹೋಶುವನು ಸರ್ವೇಶ್ವರನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರವೇ ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದುಬಿಟ್ಟು, ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:9
6 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.


ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.


ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು