ಯೆಹೋಶುವ 12:1 - ಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನು ಮತ್ತು ಕಣಿವೆ ಪ್ರದೇಶದ ಪೂರ್ವಭಾಗವನ್ನು ಸ್ವಾಧೀನಮಾಡಿಕೊಂಡರು. ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ಯರು ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಅರ್ನೋನ್ ತಗ್ಗು ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ತಗ್ಗಾದ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ: ಅಧ್ಯಾಯವನ್ನು ನೋಡಿ |