ಯೆಹೋಶುವ 12:2 - ಕನ್ನಡ ಸತ್ಯವೇದವು C.L. Bible (BSI)2 ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಇವನ ರಾಜ್ಯ, ಅರ್ನೋನ್ ಕಣಿವೆಯ ಅಂಚಿನಲ್ಲಿ ಇರುವ ಅರೋಯೇರ್ ನಗರವನ್ನು ಮತ್ತು ಆ ಕಣಿವೆಯಲ್ಲೇ ಇರುವ ನಗರವನ್ನು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ನದಿಯ ತನಕವಿರುವ ಗಿಲ್ಯಾದಿನ ಅರ್ಧಪ್ರಾಂತ್ಯ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 [ಅವರಲ್ಲಿ ಮೊದಲನೆಯವನು] ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನ್ ಎಂಬವನು. ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧ ಪ್ರಾಂತವು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದರು. ಅವನು ಅರ್ನೋನ್ ನದಿಯ ತೀರದಲ್ಲಿದ್ದ ಅರೋಯೇರ್‌ನಿಂದ ಯಬ್ಬೋಕ್ ನದಿಯವರೆಗಿರುವ ಪ್ರದೇಶವನ್ನು ಆಳುತ್ತಿದ್ದನು. ಅವನ ರಾಜ್ಯವು ಆ ತಗ್ಗು ಪ್ರದೇಶದ ಮಧ್ಯದಿಂದ ಪ್ರಾರಂಭವಾಗುತ್ತಿತ್ತು. ಇದು ಅಮ್ಮೋನಿಯರ ಪ್ರದೇಶಕ್ಕೂ ಮೇರೆಯಾಗಿತ್ತು. ಗಿಲ್ಯಾದಿನ ಅರ್ಧ ಪ್ರದೇಶವು ಸೀಹೋನನ ಆಳ್ವಿಕೆಗೆ ಒಳಗಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು. ಅಧ್ಯಾಯವನ್ನು ನೋಡಿ |