Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:7 - ಕನ್ನಡ ಸತ್ಯವೇದವು C.L. Bible (BSI)

7 ಯೆಹೋಶುವನು ಇಸ್ರಯೇಲರ ಸಮೇತ, ಜೋರ್ಡನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಯೊರ್ದನ್ ಹೊಳೆಯ ಪಶ್ಚಿಮದಲ್ಲಿ ಲೆಬನೋನ್ ತಗ್ಗಿನಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರು ಜೋರ್ಡನ್ ನದಿಯ ಪಶ್ಚಿಮ ಪ್ರದೇಶದಲ್ಲಿದ್ದ ಅರಸರನ್ನು ಸಹ ಸೋಲಿಸಿದರು. ಈ ಪ್ರದೇಶದಲ್ಲಿ ಯೆಹೋಶುವನು ಜನರ ಮುಂದಾಳಾದನು. ಯೆಹೋಶುವನು ಈ ಪ್ರದೇಶವನ್ನು ಇಸ್ರೇಲಿನ ಹನ್ನೆರಡು ಕುಲಗಳಿಗೆ ಹಂಚಿದನು. ದೇವರು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ಪ್ರದೇಶವೇ ಅದಾಗಿತ್ತು. ಈ ಪ್ರದೇಶವು ಲೆಬನೋನ್ ಕಣಿವೆಯ ಬಾಲ್ಗಾದ್ ಮತ್ತು ಸೇಯೀರ್ ಹತ್ತಿರವಿದ್ದ ಹಾಲಾಕ್ ಬೆಟ್ಟದ ನಡುವೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋಶುವನು ಇಸ್ರಾಯೇಲರ ಸಮೇತ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶದ ಅರಸರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:7
16 ತಿಳಿವುಗಳ ಹೋಲಿಕೆ  

ಅವನು ಸೇಯೀರಿನ ಹಾದಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ನಗರದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಅರಸರನ್ನೆಲ್ಲಾ ಹಿಡಿದು ಸಂಹರಿಸಿಬಿಟ್ಟನು.


ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.


ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು; ಸೇಯೀರ್ ನಾಡಿನಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ನಾಡನ್ನು ದಾಟುವುದಕ್ಕಿದ್ದೀರಿ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


“ಆಗ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಮಲೆನಾಡನ್ನು ಸುತ್ತುತ್ತಿದ್ದೆವು.


ದೀಶೋನ್, ಏಚೆರ್ ಮತ್ತು ದೀಶಾನ್. ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ನಾಡಿನಲ್ಲಿ ಅಧಿಪತ್ಯ ನಡೆಸಿದ ಕುಲನಾಯಕರು ಇವರೇ.


ಆ ನಾಡಿನ ಮೂಲನಿವಾಸಿಗಳು ಹೋರಿಯನಾದ ಸೇಯೀರನಿಂದ ಹುಟ್ಟಿದವರು. ಲೋಟಾನ್, ಶೋಬಾಲ್, ಸಿದೆಯೋನ್, ಅನಾಹ,


ಈ ಕಾರಣ ಏದೋಮನೆಂಬ ಏಸಾವನು ಸೇಯೀರ್ ಮಲೆನಾಡಿಗೆ ಹೋಗಿ ಅಲ್ಲೇ ವಾಸವಾಗಿದ್ದನು.


ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.


ಇದಲ್ಲದೆ ಎದೋಮ್ ಗುಡ್ಡ ಪ್ರಾಂತ್ಯದಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ, ಮರಳುಗಾಡಿಗೆ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು.


ನಿರ್ಮೂಲ ಮಾಡಿದನಾತ ಅಮೋರ್ಯರ ಸೀಹೋನ್ ರಾಜನನು I ಬಾಷಾನಿನ ಅರಸ ಓಗನನು, ಕಾನಾನಿನ ರಾಜ್ಯಗಳೆಲ್ಲವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು