Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:11 - ಕನ್ನಡ ಸತ್ಯವೇದವು C.L. Bible (BSI)

11 ಗಿಲ್ಯಾದ್ ನಾಡು, ಗೆಷ್ಯೂರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಪ್ರದೇಶ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗಿಲ್ಯಾದ್ ಸೀಮೆಯು, ಗೆಷೂರ್ಯರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಗಿಲ್ಯಾದ್ ಪಟ್ಟಣವೂ ಸಹ ಈ ಪ್ರದೇಶಕ್ಕೆ ಒಳಪಟ್ಟಿತ್ತು. ಗೆಷೂರ್ಯರು ಮತ್ತು ಮಾಕತೀಯರು ವಾಸಮಾಡುತ್ತಿದ್ದ ಪ್ರದೇಶವು ಸಹ ಈ ಪ್ರದೇಶಕ್ಕೆ ಸೇರಿತ್ತು. ಇಡೀ ಹೆರ್ಮೋನ್ ಬೆಟ್ಟಪ್ರದೇಶ ಮತ್ತು ಸಲ್ಕಾ ಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಆ ಪ್ರದೇಶಕ್ಕೆ ಸೇರಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದರೊಂದಿಗೆ ಗಿಲ್ಯಾದ್, ಗೆಷೂರ್ಯರ, ಮಾಕಾತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಸಲೆಕಾವರೆಗೆ ಇರುವ ಇಡೀ ಬಾಷಾನ್ ಪೂರ್ತಿಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:11
13 ತಿಳಿವುಗಳ ಹೋಲಿಕೆ  

ಆದರೆ ಗೆಷೂರ್ಯರ ಮತ್ತು ಅರಾಮ್ಯರ ರಾಜ್ಯಗಳವರು ಯಾಯೀರನ ಹಾಗೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನೂ ಅವುಗಳ ಸಮೀಪದ ಪಟ್ಟಣಗಳನ್ನೂ ಸೇರಿ ಒಟ್ಟು ಅರುವತ್ತು ಪಟ್ಟಣಗಳನ್ನು ಗೆದ್ದುಕೊಂಡರು. ಅಲ್ಲಿ ವಾಸಿಸಿದ್ದ ಎಲ್ಲಾ ಜನರೂ ಗಿಲ್ಯಾದನ ತಂದೆ ಮಾಕೀರನ ವಂಶಜರೇ ಆಗಿದ್ದರು.


ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.


“ಗಾದ್ಯರಲ್ಲೂ ರೂಬೇನ್ಯರಲ್ಲೂ ಯುದ್ಧಸನ್ನದ್ಧರಾದವರೆಲ್ಲರು ನಿಮ್ಮೊಡನೆ ಜೋರ್ಡನ್ ನದಿಯನ್ನು ದಾಟಿ ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧಮಾಡಿದ್ದೇ ಆದರೆ ಕಾನಾನ್ ನಾಡು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸೊತ್ತಾಗಿ ಕೊಡಿ.


ಹೀಗೆ ಮೀಶೋರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಕಾ, ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.


ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.


ಅವು ಯಾವುವೆಂದರೆ - ಈಜಿಪ್ಟಿನ ಈಚೆಯಿರುವ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರ್, ಎಕ್ರೋನ್ ಎಂಬ ನಗರಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯ;


ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಎಲ್ಲೆಗೆ ಈಚೆಕಡೆ ಇದ್ದಂಥ ಎಲ್ಲ ನಗರಗಳು;


ಹೆಷ್ಬೋನಿನ ಅರಸ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಗಿಲ್ಯಾದಿನ ಎಲ್ಲ ನಗರಗಳು, ರಬ್ಬಾ ಊರಿನ ಪೂರ್ವದಲ್ಲಿ ಇರುವ ಅರೋಯೇರ್ ನಗರದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,


ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡುಮಕ್ಕಳ ಸಮೇತ ಸೊತ್ತು ದೊರಕಿದ್ದರಿಂದ ಮನಸ್ಸೆಯವರಿಗೆ ಜೋರ್ಡನಿನ ಆಚೆಯಿದ್ದ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲೂ ಹತ್ತುಪಾಲು ಸಿಕ್ಕಿದವು.


ರೂಬೇನನ ಗೋತ್ರದವರು ವಾಸಿಸಿದ್ದ ಸ್ಥಳದ ಉತ್ತರಕ್ಕೆ ಬಾಷಾನಿನ ಪ್ರದೇಶದಲ್ಲಿ ಪೂರ್ವದಲ್ಲಿರುವ ಸಲ್ಕದವರೆಗೆ ಗಾದ್ ಕುಲದವರು ವಾಸಿಸಿದರು.


ಕೆಲವರು ಜೋರ್ಡನ್ ನದಿ ದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು