ಯೆಹೋಶುವ 13:12 - ಕನ್ನಡ ಸತ್ಯವೇದವು C.L. Bible (BSI)12 ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದು ಸಲ್ಕಾ ನಗರದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು. ಮೋಶೆಯೇ ಅವರನ್ನು ಜಯಿಸಿ ಅವರ ನಾಡುಗಳನ್ನು ಸ್ವಾಧೀನಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದು ಸಲ್ಕಾಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಇವುಗಳೇ. ಮೋಶೆಯೇ ಅವರನ್ನು ಜಯಿಸಿ ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಓಗ್ ರಾಜನ ಎಲ್ಲ ಪ್ರಾಂತ್ಯಗಳು ಆ ಪ್ರದೇಶದಲ್ಲಿ ಸೇರಿತ್ತು. ಓಗ್ ರಾಜನು ಬಾಷಾನಿನಲ್ಲಿ ಆಳುತ್ತಿದ್ದನು. ಮೊದಲು ಅವನು ಅಷ್ಟರೋತ್ ಮತ್ತು ಎದ್ರೈಗಳಲ್ಲಿದ್ದುಕೊಂಡು ಆಳುತ್ತಿದ್ದನು. ಓಗನು ರೆಫಾಯರ ವಂಶಸ್ಥನಾಗಿದ್ದನು. ಮೊದಲು ಮೋಶೆಯು ಆ ಜನರನ್ನು ಸೋಲಿಸಿ ಅವರ ಪ್ರದೇಶವನ್ನು ತೆಗೆದುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಂದರೆ, ಬಾಷಾನಿನಲ್ಲಿ ಅಷ್ಟಾರೋತ್, ಎದ್ರೈ ಎಂಬ ಊರುಗಳಲ್ಲಿ ಆಳಿದ ರೆಫಾಯರ ವಂಶಸ್ಥನಾದ ಓಗನ ಸಮಸ್ತ ರಾಜ್ಯವೆಲ್ಲಾ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ, ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿ |