Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:14 - ಕನ್ನಡ ಸತ್ಯವೇದವು C.L. Bible (BSI)

14 ಲೇವಿ ಕುಲದವರಿಗೆ ಮಾತ್ರ ಯಾವ ಪಾಲೂ ಸಿಕ್ಕಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನು ಆಜ್ಞಾಪಿಸಿದಂತೆ ಯಜ್ಞಶೇಷವೇ ಅವರ ಸೊತ್ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಲೇವಿ ಕುಲದವರಿಗೆ ಮಾತ್ರ ಪಾಲು ಸಿಕ್ಕಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಲೇವಿಕುಲದವರಿಗೆ ಮಾತ್ರ ಯಾವ ಪ್ರದೇಶವೂ ಸಿಕ್ಕಲಿಲ್ಲ. ಅದಕ್ಕೆ ಬದಲಾಗಿ, ಇಸ್ರೇಲರ ದೇವರಾದ ಯೆಹೋವನು ಅವರಿಗೆ ವಾಗ್ದಾನ ಮಾಡಿದಂತೆ ಸರ್ವಾಂಗಹೋಮಗಳಾಗಿ ಅರ್ಪಿತವಾಗುವ ಎಲ್ಲಾ ಪಶುಗಳಲ್ಲಿ ಉಳಿದ ಭಾಗವನ್ನು ಅವರು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಅವನು ಅವರಿಗೆ ಹೇಳಿದ ಪ್ರಕಾರ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದ್ದರಿಂದ, ಇಸ್ರಾಯೇಲಿನ ದೇವರೇ ಅವರ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:14
12 ತಿಳಿವುಗಳ ಹೋಲಿಕೆ  

ನೀವು ನಿಮ್ಮ ನಾಡಿನಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಇದು ನೆನಪಿರಲಿ.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಆದುದರಿಂದ ಮಿಕ್ಕ ಇಸ್ರಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ವಾಸ್ತ್ಯ ದೊರಕಲಿಲ್ಲ. ನಿಮ್ಮ ದೇವರಾದ ಸರ್ವೇಶ್ವರ ಅವರಿಗೆ ಹೇಳಿದಂತೆ ಸರ್ವೇಶ್ವರಸ್ವಾಮಿಯೇ ಅವರ ಸೊತ್ತು.


ಇಸ್ರಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ನಾಡಿನೊಳಗಿಂದ ಅಟ್ಟಿಬಿಡಲಿಲ್ಲ. ಅವರು ಇಂದಿನವರೆಗೂ ಇಸ್ರಯೇಲರ ಮಧ್ಯದಲ್ಲೇ ಇದ್ದಾರೆ.


ಮೋಶೆ ರೂಬೇನ್ಯರ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಕೊಟ್ಟ ಪ್ರದೇಶಗಳು ಇವು :


ಆದರೆ ಲೇವಿಯ ಕುಲಕ್ಕೆ ಮೋಶೆ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನೇ ಅವರ ಸೊತ್ತೆಂದು ವಾಗ್ದಾನ ಮಾಡಲಾಗಿತ್ತು.


ಅವರು ಧಾನ್ಯ ನೈವೇದ್ಯವನ್ನೂ ದೋಷಪರಿಹಾರಕ ಬಲಿದ್ರವ್ಯವನ್ನೂ ಪ್ರಾಯಶ್ಚಿತ್ತ ಬಲಿದ್ರವ್ಯವನ್ನೂ ಅನುಭವಿಸಲಿ. ಸರ್ವೇಶ್ವರನದಾಗಿಯೇ ಇರಲೆಂದು ಇಸ್ರಯೇಲರು ಹರಕೆಮಾಡಿಕೊಡುವುದೆಲ್ಲವೂ ಅವರಿಗೆ ಸಲ್ಲಬೇಕು.


ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ. ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು.


“ಯಾಜಕರಿಗೆ ಇರುವ ಒಂದು ಸೊತ್ತು ಎಂದರೆ ನಾನೇ. ಇಸ್ರಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು. ನಾನೇ ಅವರಿಗೆ ಆಸ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು