Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:17 - ಕನ್ನಡ ಸತ್ಯವೇದವು C.L. Bible (BSI)

17 ಮೇದೆಬದ ಬಯಲುನಾಡಿಗೆ ಸೇರಿದ ಹೆಷ್ಬೋನ್ ನಗರ, ಅಲ್ಲೆ ಎತ್ತರವಾದ ಬಯಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್, ಬೇತ್ಬಾಳ್ಮೆಯೋನ್ ಯಹಚಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮೇದೆಬದ ತಪ್ಪಲಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣವೂ ಅದೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್‍ಬಾಳ್, ಬೇತ್ಬಾಳ್ಮೆಯೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಪ್ರದೇಶವು ಹೆಷ್ಬೋನಿನವರೆಗೆ ವಿಸ್ತರಿಸಿ ತಪ್ಪಲಪ್ರದೇಶದ ಎಲ್ಲಾ ಊರುಗಳನ್ನೊಳಗೊಂಡಿತ್ತು. ಆ ಊರುಗಳು ಯಾವುವೆಂದರೆ: ದೀಬೋನ್, ಬಾಮೋತ್‌ಬಾಳ್, ಬೇತ್ಬಾಳ್ಮೆಯೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸಮನಾದ ಭೂಮಿಯಲ್ಲಿರುವ ಹೆಷ್ಬೋನ್ ಪಟ್ಟಣವೂ ಅದರ ಎಲ್ಲಾ ಪಟ್ಟಣಗಳಾದ ದೀಬೋನ್, ಬಾಮೋತ್ ಬಾಳ್, ಬೇತ್ ಬಾಳ್ ಮೆಯೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:17
17 ತಿಳಿವುಗಳ ಹೋಲಿಕೆ  

ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಊರುಗಳನ್ನು ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು ‘ಬಾಳ್’ ಎಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಯೇಲರ ಶಿಬಿರದೊಂದು ಭಾಗವನ್ನು ತೋರಿಸಿದನು.


ಅವರು ಮರುಭೂಮಿಯನ್ನು ಬಿಟ್ಟು ಮತ್ತಾನಕ್ಕೂ ಮತ್ತಾನದಿಂದ ನಹಲೀಯೇಲಿಗೂ ನಹಲೀಯೇಲಿನಿಂದ ಬಾಮೋತಿಗೂ ಬಂದರು.


ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ, ಅದೇ ಕಣಿವೆಯ ಮಧ್ಯೆಯಿದ್ದ ನಗರ;


ಹೊಲಗದ್ದೆಗಳಿದ್ದವರು ವಾಸಿಸುತ್ತಿದ್ದ ಊರುಗಳು - ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್, ಇವುಗಳೂ ಇವುಗಳ ಗ್ರಾಮಗಳೂ;


ಸೂರೆಗಾರನು ಪ್ರತಿಯೊಂದು ನಗರದ ಮೇಲೆ ಬೀಳುವನು. ಯಾವ ಪಟ್ಟಣವೂ ಉಳಿಯದು. ಸರ್ವೇಶ್ವರನ ನುಡಿಯಂತೆಯೆ ಮೇಲ್ನಾಡು ನಾಶವಾಗುವುದು, ಬೈಲ್ನಾಡು ಹಾಳಾಗುವುದು.


ಯುವತಿಯೇ, ದೀಬೋನ್ ನಗರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಕುಳಿತುಕೊ ಬಾಯಾರಿದವಳಂತೆ. ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದಿದ್ದಾನೆ. ನಿನ್ನ ಕೋಟೆಕೊತ್ತಲುಗಳನ್ನು ಅವನು ಕೆಡವಿದ್ದಾನೆ.


ಕಿರ್ಯಾತಯಿಮ್, ಬೇತ್ ಗಾಮೂಲ್, ಬೇತ್‍ಮೆಯೋನ್, ಕೆರೀಯೋತ್,


ಆದುದರಿಂದ ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್‍ಯೆಷೀಮೋತ್, ಬಾಳ್‍ಮೆಯೋನ, ಕಿರ್ಯಾಥಯಿಮ್ ಎಂಬ ಪಟ್ಟಣಗಳು, ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.


ಹೆಷ್ಬೋನ್ ಪಟ್ಟಣ ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಹಿಂದಿನ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ಹೊಳೆಯವರೆಗೂ ಅವನ ನಾಡನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದನು.


ಅವರನ್ನು ಹೊಡೆದೆವು ನಾವು ಬಿಲ್ಲುಬಾಣಗಳಿಂದ, ಹೆಷ್ಬೋನಿನಿಂದ ದೀಬೋನಿನವರೆಗೆ ಸರ್ವನಾಶ! ಹಾಳು ಮಾಡಿದೆವು ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ.


ಉಳಿದ ಎರಡುವರೆ ಕುಲಗಳ ಜನರಿಗೆ ಜೋರ್ಡನಿನ ಆಚೆಯಲ್ಲಿ ಮೋಶೆಯೇ ಸೊತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಡಲಿಲ್ಲ.


ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ. ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು.


ಇಸ್ರಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲೂ ಅವುಗಳ ಗ್ರಾಮಗಳಲ್ಲೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲೂ ವಾಸಿಸುತ್ತಿದ್ದಾರಲ್ಲವೆ? ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?


ಅಜಾಜನ ಮಗನೂ ಶೆಮಾಯನ ಮೊಮ್ಮಗನೂ ಆದ ಬೆಳ. ಈ ಗೋತ್ರದವರು ಅರೋಯೇರದಲ್ಲಿಯೂ ಅಲ್ಲಿಂದ ನೆಬೋ ಹಾಗೂ ಬಾಳ್ಮೆಯೋನ್ ಸ್ಥಳಗಳವರೆಗಿನ ಪ್ರದೇಶಗಳಲ್ಲಿ ವಾಸಿಸಿದರು.


ಮೇಲ್ನಾಡಿಗೆ ದಂಡನೆಯಾಗಿದೆ, ಹೋಲೇನ್, ಯಾಚಾ, ಮೇಫಾತ್, ದೀಬೋನ್, ನೆಬೋ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು